spot_img
Saturday, July 4, 2026
spot_img

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ಬಗ್ಗೆ ನಿಂದನೆ: ಪ್ರಕರಣ ದಾಖಲು

ಕೋಟ: ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ) ಬಿದ್ಕಲ್ ಕಟ್ಟೆ ಇಲ್ಲಿ ಆರೋಪಿ ಪ್ರವೀಣ ಕುಲಾಲ್ ಸಹಕಾರಿ ಸಂಘದಲ್ಲಿ ಆಸ್ತಿ ಅಡಮಾನ ಇರಿಸಿ ಸಾಲ ಪಡೆದುಕೊಂಡಿದ್ದು. ಸಾಲ ಮರುಪಾವತಿ ಮಾಡದೇ ಇರುವ ಕಾರಣ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕೋರ್ಟನಲ್ಲಿ ದಾವೆ ಮಾಡಿದ್ದು ಅದು ಡಿಕ್ರಿ ಆಗಿ ದಿನಾಂಕ 29/6/2026 ರಂದು ಸಹಕಾರ ಸಂಘಗಳ ಮಾರಾಟಾಧಿಕಾರಿಯವರು ಸಾಲಕ್ಕೆ ಅಡಮಾನ ಇರಿಸಿದ ಆಸ್ತಿಯನ್ನು ಏಲಂ ಪ್ರಕ್ರಿಯೆ ಮಾಡಿದ್ದರು. ಈ ವಿಷಯದಲ್ಲಿ ಕೋಪಗೊಂಡ ಆರೋಪಿಯು ದಿನಾಂಕ 30/6/2026 ರಂದು ಬೆಳಿಗ್ಗೆ 11:30 ಗಂಟೆಗೆ ಸಂಘದ ಕಛೇರಿಗೆ ಬಂದು ಅವರ ಜಾಗ ಏಲಂ ಆಗಿರುವ ವಿಚಾರದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಆಡಳಿತ ಮಂಡಳಿ ಸಿಬ್ಬಂದಿಯವರಿಗೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ಅಲ್ಲದೆ ಸಹಕಾರಿ ಸಂಘದ ಬಗ್ಗೆ ಅವಹೇಳನಕಾರಿಯಾಗಿ ವಿಡಿಯೋ ಚಿತ್ರೀಕರಣ ಮಾಡಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವುದಾಗಿ ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಾರ್ವತಿ ಎಂ ಇವರು ದೂರು ನೀಡಿದ್ದರು. ಕೋಟ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 112/2026 ಕಲಂ:352 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!