spot_img
Saturday, July 4, 2026
spot_img

ಸರಕಾರಿ ಪದವಿ ಪೂರ್ವ ಕಾಲೇಜು (ಕೆ.ಪಿ.ಎಸ್)ವಂಡ್ಸೆ-ನೆಂಪು: ಪ್ರತಿಭಾ ಪುರಸ್ಕಾರ

ಕುಂದಾಪುರ: ಹಳೆ ವಿದ್ಯಾರ್ಥಿಗಳ ಸಂಘ (ರಿ.) ಸರಕಾರಿ ಪದವಿ ಪೂರ್ವ ಕಾಲೇಜು (ಕರ್ನಾಟಕ ಪಬ್ಲಿಕ್ ಸ್ಕೂಲ್) ವಂಡ್ಸೆ-ನೆಂಪು ಇಲ್ಲಿ 2025-26ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜು.4 ಶನಿವಾರ ಹೊಳ್ಮಗೆ ವಿನೋದ ರವಿ ಶೆಟ್ಟಿ ಸಾಂಸ್ಕೃತಿಕ ಸಭಾ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನೆನಪು ಸಂತೋಷ್ ಕುಮಾರ್ ಶೆಟ್ಟಿ ವಹಿಸಿದ್ದರು. ಹಳೆ ವಿದ್ಯಾರ್ಥಿಯು ನಿವೃತ್ತ ಮುಖ್ಯೋಪಾಧ್ಯಾಯರು ಆದ ನೆನಪು ರಾಮಕೃಷ್ಣ ಭಟ್ಟರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಹಳೆ ವಿದ್ಯಾರ್ಥಿಗಳ ಸಂಘದ ಸ್ಥಾಪಕ ಅಧ್ಯಕ್ಷರಾದ ವಂಡಬಳ್ಳಿ ಜಯರಾಮ ಶೆಟ್ಟಿ ಅವರು ವಿದ್ಯಾರ್ಥಿಗಳನ್ನು ಗೌರವಿಸಿ ಶುಭ ಹಾರೈಸಿದರು. ಹಳೆ ವಿದ್ಯಾರ್ಥಿ ಡಾ. ರಾಜೇಶ್ ಬಾಯರಿ ವಿದ್ಯಾರ್ಥಿಗಳನ್ನು ಗೌರವಿಸಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯಕ್ ಉಪಸ್ಥಿತರಿದ್ದು ವಿದ್ಯಾರ್ಥಿಗಳನ್ನು ಗೌರವಿಸಿ ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯ ಚಟುವಟಿಕೆಗೆ ಶ್ಲಾಘನೆ ವ್ಯಕ್ತಪಡಿಸಿದರು.

ಉದ್ಯಮಿಗಳಾದ ನೇರಳಕಟ್ಟೆ ನಾರಾಯಣ ನಾಯಕ್, ಪ್ರಾಂಶುಪಾಲರಾದ ಕೃಷ್ಣರಾಜ ಭಟ್, ಮುಖ್ಯೋಪಾಧ್ಯಾಯರಾದ ಶ್ರೀಧರ ಭಟ್, ಖಜಾಂಚಿ ಸುಧಾಕರ ನೆಂಪು, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಕುಪ್ಪಯ್ಯ ಮರಾಠಿ, ಸಿಬಿಸಿ ಸದಸ್ಯರಾದ ಅನಿಲ್ ಮೆಂಡನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ, ಅಧ್ಯಾಪಕ ರವಿರಾಜ್ ಶೆಟ್ಟಿ ಅವರು ಕೂಡ ಮಾಡಿದ ಉಚಿತ ಐಡಿ ಕಾರ್ಡ್‌ಗಳ ವಿತರಣೆ ನಡೆಯಿತು. ಉತ್ತಮ ಫಲಿತಾಂಶಕ್ಕೆ ಶ್ರಮಿಸಿದ ಎಲ್ಲಾ ಅಧ್ಯಾಪಕ ವೃಂದದವರನ್ನು ಗೌರವಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಅಧ್ಯಾಪಕ ಚಿತ್ತೂರು ರವಿರಾಜ ಶೆಟ್ಟಿ ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಅಧ್ಯಾಪಕ ಗಣೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!