spot_img
Tuesday, July 7, 2026
spot_img

ತಲ್ಲೂರು: ಶಾಲಾ ಅಭಿವೃದ್ಧಿಗೆ ದೇಣಿಗೆ ನೀಡಿದ ದಾನಿಗಳ ಭಾವಚಿತ್ರ, ನಾಮಫಲಕ ಅನಾವರಣ

ಕುಂದಾಪುರ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ತಲ್ಲೂರಿನಲ್ಲಿ ಇತ್ತೀಚೆಗೆ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ದೇಣಿಗೆ ನೀಡಿದ ದಾನಿಗಳ ಫೋಟೋ ಮತ್ತು ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಟಿ.ಬಾಲಚಂದ್ರ ಶೆಟ್ಟಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷರಾದ ನಾರಾಯಣ ಶೆಟ್ಟಿ ಮೇಲ್ಮನೆ, ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಪ್ರಶಾಂತ್ ನಾಯ್ಕ, ಮುಖ್ಯ ಶಿಕ್ಷಕಿ ಪ್ರೇಮಾ, ಹಳೆ ವಿದ್ಯಾರ್ಥಿಗಳ ಸಂಘದ ಸದಸ್ಯರು, ಎಸ್.ಡಿ.ಎಂ.ಸಿ ಸದಸ್ಯರು, ಶಾಲಾ ಶಿಕ್ಷಕರು, ಪೋಷಕರು, ಹೆಚ್ಚಿನ ಸಂಖ್ಯೆಯಲ್ಲಿ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಟಿ.ಬಾಲಚಂದ್ರ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿ, ಹಳೆ ವಿದ್ಯಾರ್ಥಿಗಳು ಒಂದು ಶಾಲೆಯ ಬೆನ್ನೆಲುಬು ಇದ್ದ ಹಾಗೆ,ಇಂತಹ ಕಾರ್ಯಕ್ರಮಗಳು ಎಲ್ಲರಿಗೂ ಪ್ರೇರಣೆಯಾಗುವುದರ ಜೊತೆಗೆ, ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಹಳೆ ವಿದ್ಯಾರ್ಥಿಗಳು ಶಾಲಾ ಅಭಿವೃದ್ಧಿಯಲ್ಲಿ ಕೈಜೋಡಿಸುವಂತಾಗುತ್ತದೆ, ವಿದ್ಯಾರ್ಥಿಗಳಿಗೆ ಶಾಲೆಯ ಬಗ್ಗೆ ಅಭಿಮಾನ ಮೂಡುತ್ತದೆ ಎಂದು ಹೇಳಿದರು.

ನಾರಾಯಣ ಶೆಟ್ಟಿ ಮೇಲ್ಮನೆ ಸ್ವಾಗತಿಸಿದರು. ಸುಂದರ ಶೆಟ್ಟಿ ಇವರು ವಂದಿಸಿದರು. ಹಿರಿಯ ಹಳೆ ವಿದ್ಯಾರ್ಥಿಗಳಿಂದ ಫೋಟೋ ಮತ್ತು ನಾಮಫಲಕ ಅನಾವರಣ ಮಾಡಲಾಯಿತು. ಜೊತೆ ಕಾರ್ಯದರ್ಶಿ ನಾಗೇಂದ್ರ ಆಚಾರ್ಯ ದಾನಿಗಳ ಪಟ್ಟಿ ವಾಚಿಸಿದರು. ಸಹ ಶಿಕ್ಷಕಿ ರತ್ನ ಪೂಜಾರಿ, ಆಯವ್ಯಯ ಮಂಡನೆ ಮಾಡಿದರು. ದೇವರಾಜ್ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!