spot_img
Monday, August 24, 2026
spot_img

ಅಂಪಾರು ರಾಜ್ಯ ಹೆದ್ದಾರಿಯಲ್ಲಿ ಮಳೆನೀರು ಸಮಸ್ಯೆ: ಶಾಸಕರ ಸೂಚನೆಯ ಮೇರೆಗೆ ತಕ್ಷಣ ಪರಿಹಾರ

ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಅಂಪಾರು ಸಂಜಯ ಗಾಂಧಿ ಶಾಲೆ ಸಮೀಪ ರಾಜ್ಯ ಹೆದ್ದಾರಿ ಬದಿಯಲ್ಲಿ ಮಳೆನೀರು ನಿಂತು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವ ಕುರಿತು ಮಾಹಿತಿ ದೊರಕಿದ ತಕ್ಷಣ ಶಾಸಕ ಗುರುರಾಜ್ ಗಂಟಿಹೊಳೆ ಅವರ ನಿರ್ದೇಶನದ ಮೇರೆಗೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಬುಧವಾರ ಬೆಳಿಗ್ಗೆಯೇ ಸ್ಥಳಕ್ಕೆ ಭೇಟಿ ನೀಡಿ ಜೆಸಿಬಿ ಯಂತ್ರದ ಮೂಲಕ ಚರಂಡಿಯನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಂಡರು. ಇದರಿಂದ ಮಳೆನೀರು ರಸ್ತೆ ಮೇಲೆ ನಿಲ್ಲುವ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ದೊರೆತು ಸಾರ್ವಜನಿಕರು ಹಾಗೂ ವಾಹನ ಸವಾರರು ನೆಮ್ಮದಿಯ ಸಂಚಾರ ನಡೆಸುವಂತಾಗಿದೆ.
ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಅಧಿಕಾರಿಗಳ ಮೂಲಕ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ ಶಾಸಕರ ಕಾರ್ಯವನ್ನು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಜನಪ್ರತಿನಿಧಿ ಪತ್ರಿಕೆ ಈ ಬಗ್ಗೆ ಚಿತ್ರಸಹಿತ ವರದಿ ಪ್ರಕಟಿಸಿತ್ತು. ವರದಿಯನ್ನು ಗಮನಿಸಿ ಶಾಸಕರು ತಕ್ಷಣ ಸ್ಪಂದಿಸಿದ್ದಾರೆ.

ಮೊದಲು ಹೀಗಿತ್ತು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!