spot_img
Saturday, July 11, 2026
spot_img

ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನ: ನೂತನ ದೇವಾಲಯ ನಿರ್ಮಾಣಕ್ಕೆ ಶಿಲಾ ಪೂಜಾ ಕಾರ್ಯಕ್ರಮ

ಕುಂದಾಪುರ: ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನ ಅಭಿವೃದ್ಧಿ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿ ಮರವಂತೆ ನೇತೃತ್ವದಲ್ಲಿ ನೂತನ ದೇವಾಲಯ ನಿರ್ಮಾಣಕ್ಕೆ ಶಿಲಾ ಪೂಜಾ ಕಾರ್ಯಕ್ರಮ ಜುಲೈ 12 ಆದಿತ್ಯವಾರ ಬೆಳಿಗ್ಗೆ 7-30ಕ್ಕೆ ನಡೆಯಲಿದೆ.

ಬೆಳಿಗ್ಗೆ 7-30ಕ್ಕೆ ಗಣಪತಿ ಹವನ ಮತ್ತು ಶ್ರೀವರಾಹ, ಶ್ರೀ ವಿಷ್ಣು, ಶ್ರೀನರಸಿಂಹ ದೇವರಿಗೆ ಪುಷ್ಪಲಂಕಾರ ಪೂಜೆ, ಬೆಳಿಗ್ಗೆ 8ಕ್ಕೆ ಶ್ರೀ ಗಂಗಾಧರೇಶ್ವ ಸ್ವಾಮಿಗೆ ರುದ್ರಾಭಿಷೇಕ ಮತ್ತು ಅಲಂಕಾರ ಪೂಜೆ, ಬೆಳಿಗ್ಗೆ 9.30ಕ್ಕೆ ಶಿಲಾ ಮೆರವಣಿಗೆ, ಬೆಳಿಗ್ಗೆ 10-30ರಿಂದ ಶಿಲಾಪೂಜಾ ಕಾರ್ಯಕ್ರಮ, ಮಧ್ಯಾಹ್ನ 12-30ಕ್ಕೆ ಮಹಾಮಂಗಳಾರತಿ, ಮಧ್ಯಾಹ್ನ 1 ಗಂಟೆಯಿಂದ ಪ್ರಸಾದ ಭೋಜನ ನಡೆಯಲಿದೆ.

ಬೆಳಿಗ್ಗೆ 11-30ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಶ್ರೀಮಠ ಬಾಳೆಕುದ್ರು ಇಲ್ಲಿನ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ವಾಸುದೇವ ಸದಾಶಿವಾಶ್ರಮ ಮಹಾಸ್ವಾಮಿಗಳು ಆಶೀರ್ವಚನ ನೀಡಲಿದ್ದಾರೆ. ಶ್ರೀ ವರಾಹ ದೇವಸ್ಥಾನ ಮರವಂತೆ ಇದರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ವೇ.ಮೂ.ರಾಜೇಶ ಹೆಬ್ಬಾರ್ ಧರ್ಮಸಂದೇಶ ನೀಡಲಿದ್ದಾರೆ. ಶಾಸಕ ಗುರುರಾಜ ಗಂಟಿಹೊಳೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!