spot_img
Monday, July 13, 2026
spot_img

ಮೂಡ್ಲಕಟ್ಟೆ: ಬ್ರಿಡ್ಜ್ಯಿಂಗ್ ಮ್ಯಾನೇಜ್ಮೆಂಟ್ ಎಂಡ್ ಕಂಪ್ಯೂಟರ್ ಅಪ್ಲಿಕೇಶನ್ ” ವಿಷಯದ ಕಾರ್ಯಾಗಾರ

ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಎಂಬಿಎ ಮತ್ತು ಎಂಸಿಎ ವಿಭಾಗದ ವತಿಯಿಂದ ” ಆರ್ಟಿಫಿಶಿಯಲ್ ಇಂಟಲಿಜೆನ್ಸ್ : ಬ್ರಿಡ್ಜ್ಯಿಂಗ್ ಮ್ಯಾನೇಜ್ಮೆಂಟ್ ಎಂಡ್ ಕಂಪ್ಯೂಟರ್ ಅಪ್ಲಿಕೇಶನ್ ” ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ಜುಲೈ 10ರಂದು ಆಯೋಜಿಸಲಾಯಿತು.
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಎಂಐಟಿ ಕುಂದಾಪುರದ ಪ್ರಾಧ್ಯಾಪಕರು ಹಾಗೂ ಸಂಶೋಧನಾ ಡೀನ್ ಡಾ. ವಿನೋದ್ ಕುಮಾರ್ ಭಾಗವಹಿಸಿ, ಎ ಐ ಅಗತ್ಯತೆ, ನಿರ್ವಹಣಾ ಕ್ಷೇತ್ರ ಹಾಗೂ ಕಂಪ್ಯೂಟರ್ ಅನ್ವಯಿಕೆಗಳಲ್ಲಿ ಅದರ ಬಳಕೆ, ಉದ್ಯೋಗಾವಕಾಶಗಳು ಮತ್ತು ಭವಿಷ್ಯದ ತಂತ್ರಜ್ಞಾನಗಳ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಿದರು. ಎ ಐ ತಂತ್ರಜ್ಞಾನವು ವಿವಿಧ ಕ್ಷೇತ್ರಗಳಲ್ಲಿ ಉಂಟುಮಾಡುತ್ತಿರುವ ಪರಿವರ್ತನೆಗಳನ್ನು ಉದಾಹರಣೆಗಳೊಂದಿಗೆ ವಿವರಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ ವಹಿಸಿದ್ದರು. ವೇದಿಕೆಯಲ್ಲಿ ಎಂಬಿಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರಾ ಪೂಜಾರಿ ಹಾಗೂ ಎಂಸಿಎ ವಿಭಾಗದ ಮುಖ್ಯಸ್ಥೆ ಡಾ. ನಂದಿನಿ ಉಪಸ್ಥಿತರಿದ್ದರು.
ಎಂಬಿಎ ವಿದ್ಯಾರ್ಥಿನಿ ಕು. ರಕ್ಷಿತಾ ಆರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!