spot_img
Monday, July 13, 2026
spot_img

ಜನರ ಅಹವಾಲು ನೇರವಾಗಿ ಆಲಿಸುವುದೇ ಈ ಜನ ಸಂಪರ್ಕ ಸಭೆಯ ಉದ್ದೇಶ-ಶಾಸಕ ಕಿರಣ್ ಕುಮಾರ್ ಕೊಡ್ಗಿ

ಕುಂದಾಪುರ: ಗ್ರಾಮ ಮಟ್ಟದ ಸಮಸ್ಯೆಗಳ ಪರಿಹಾರದ ಬಗ್ಗೆ ಪ್ರತಿ ಗ್ರಾಮ ಪಂಚಾಯಿತಿಗೂ ಭೇಟಿ ನೀಡಿ ಜನರ ಅಹವಾಲು ನೇರವಾಗಿ ಆಲಿಸುವುದೇ ಈ ಸಭೆಯ ಉದ್ದೇಶ. ರಸ್ತೆ, ಕುಡಿಯುವ ನೀರು, ಬೀದಿ ದೀಪ, ಚರಂಡಿ ಸೇರಿದಂತೆ ಮೂಲಭೂತ ಸಮಸ್ಯೆಗಳ ಅಹವಾಲು ಸ್ವೀಕರಿಸಿ ಸ್ಥಳದಲ್ಲಿಯೇ ಅಧಿಕಾರಿಗಳೊಂದಿಗೆ ಚರ್ಚಿಸಿ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ವೇಗವಾಗಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಂಭಾಶಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀ ವಿನಾಯಕ ಸಭಾ ಭವನದಲ್ಲಿ ಸೋಮವಾರ ನಡೆದ ಜನ ಸಂಪರ್ಕ ಸಭೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಕುಂದಾಪುರ ತಾಲೂಕು ತಹಶೀಲ್ದಾರಾದ ಪ್ರದೀಪ್ ಕುರುಡೇಕರ್, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಜಿ.ಮಹೇಶ್, ಕುಂದಾಪುರ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಕುಂದಾಪುರ ತಹಶೀಲ್ದಾರ್ ಗ್ರೇಡ್ ೨ ವಸಂತ್ ಕುಮಾರ್, ಕುಂಭಾಶಿ ಗ್ರಾಮ ಆಡಳಿತ ಅಧಿಕಾರಿ ದೀಪ್ತಿ, ಕುಂಭಾಶಿ ಗ್ರಾಮ ಪಂಚಾಯಿತಿನ ಪಿಡಿ‌ಒ ಗಣೇಶ್ ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಶಿಶು ಅಭಿವೃದ್ಧಿ ಇಲಾಖೆಯಿಂದ ಸುಕನ್ಯಾ ಸಮೃದ್ಧಿ ಯೋಜನೆ ಪಲಾನುಭವಿಗಳಿಗೆ ಠೇವಣಿ ಪುಸ್ತಕ ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿ, ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮೀನುಗಾರಿಕಾ ಇಲಾಖೆ,, ಆಹಾರ ಇಲಾಖೆ, ಸೇರಿದಂತೆ ಇನ್ನಿತರ ಅನೇಕ ಇಲಾಖೆ ಅಧಿಕಾರಿಗಳು ಸಿಬ್ಬಂದಿ ವರ್ಗದವರು, ಗ್ರಾಮದ ವಿವಿಧ ಧಾರ್ಮಿಕ ಮತ್ತು ರಾಜಕೀಯ ಕ್ಷೇತ್ರದ ಪ್ರಮುಖರು ಗ್ರಾಮಸ್ಥರು ಉಪಸಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!