spot_img
Saturday, July 18, 2026
spot_img

ಎಲ್ಲಾ ವಿಭಾಗಗಳಲ್ಲೂ ಶಿಕ್ಷಣ ಪಡೆಯುವುದು ಸಹಜ ಪ್ರಕ್ರಿಯೆ” – ಸುಷ್ಮಾ ಉಳ್ಳೂರು

 

ಅಮಾಸೆಬೈಲು: ಶಿಕ್ಷಣವನ್ನು ಕೇವಲ ಪಠ್ಯಪುಸ್ತಕಗಳಿಂದ ಮಾತ್ರ ಪಡೆಯಲು ಸಾಧ್ಯವಿಲ್ಲ. ಅದನ್ನು ನಾವು ನಮ್ಮ ಪರಿಸರದಿಂದ, ನಮಗೆ ತಿಳಿಯದಂತೆಯೇ ಪಡೆಯುತ್ತೇವೆ. ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಮೂಲಕವೂ ಮಕ್ಕಳು ಬಹಳಷ್ಟು ಕಲಿಯುತ್ತಾರೆ. ಇದಕ್ಕೆ ಅಬಾಕಸ್ ಒಂದು ಉತ್ತಮ ಉದಾಹರಣೆಯಾಗಿದೆ ಎಂದು ಶಿಕ್ಷಕ-ರಕ್ಷಕ ಸಂಘದ ಮಾಜಿ ಅಧ್ಯಕ್ಷೆ ಸುಷ್ಮಾ ಉಳ್ಳೂರು ಅವರು ಅಭಿಪ್ರಾಯಪಟ್ಟರು.

ಅವರು ಡ್ಯುಯಲ್ ಸ್ಟಾರ್ ಶಾಲೆ, ಅಮಾಸೆಬೈಲು ಇಲ್ಲಿ ಆಯೋಜಿಸಿದ್ದ ಅಬಾಕಸ್ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳನ್ನು ಕೇವಲ ಪುಸ್ತಕದ ಹುಳುವಾಗಿ ಮಾಡುವ ಪರಿಪಾಠವನ್ನು ತಪ್ಪಿಸಬೇಕು. ಅದಕ್ಕಾಗಿ ಸಹಪಠ್ಯ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ಶಿಕ್ಷಕರು ಪ್ರಯತ್ನಿಸಬೇಕು. ಅಬಾಕಸ್ ಮಕ್ಕಳಿಗೆ ಉತ್ತಮ ಜ್ಞಾನದ ದೀವಿಗೆಯಾಗಿದೆ. ನಮ್ಮ ಶಾಲೆಯಲ್ಲಿ ಇದನ್ನು ಅತ್ಯಂತ ಉತ್ತಮವಾಗಿ ಕಾರ್ಯಗತಗೊಳಿಸಲಾಗುತ್ತಿದೆ ಎಂದು ಅವರು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ವಡ್ಡರ್ಸೆ ಪ್ರಕಾಶ್ ಆಚಾರ್ಯ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಶಶಿಧರ್ ದೇವಾಡಿಗ, ಅಬಾಕಸ್ ತರಬೇತುದಾರರಾದ ಸುಧಾ ಅಡಿಗ, ಮುಖ್ಯ ಶಿಕ್ಷಕಿ ರಾಧಿಕಾ ಎಸ್ ಉಪಸ್ಥಿತರಿದ್ದರು.

ಶಿಕ್ಷಕರಾದ ವಿಘ್ನೇಶ್ ದೇವಾಡಿಗ ಸ್ವಾಗತಿಸಿ, ಶಿಕ್ಷಕಿ ಜ್ಯೋತಿ ಕುಂಜತ್ತಾಯ ವಂದಿಸಿದರು. ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!