spot_img
Sunday, July 19, 2026
spot_img

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕ: ವನಮಹೋತ್ಸವ-ಸಸಿ ವಿತರಣೆ

 

ಹೆಮ್ಮಾಡಿ: ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ ಉಡುಪಿ, ಗೀತಾನಂದ ಫೌಂಡೇಶನ್ (ರಿ.) ಮಣೂರು, ಪಡುಕರೆ ಹಾಗೂ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳು ಹೆಮ್ಮಾಡಿ ಇವರ ಸಹಯೋಗದಲ್ಲಿ ವನಮಹೋತ್ಸವ-ಗಿಡ ವಿತರಣೆ ಕಾರ್ಯಕ್ರಮ ಜುಲೈ, 19 ರಂದು ಜನತಾ ಪಿ.ಯು ಕಾಲೇಜು- ಶ್ಲಾಘನ-ಶನಯ ಹಾಸ್ಟೆಲ್, ಸುಳ್ಸೆ, ಹೆಮ್ಮಾಡಿಯಲ್ಲಿ ನಡೆಯಿತು.

ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮೊಗವೀರ ಮಹಾಜನ ಸೇವಾ ಸಂಘ (ರಿ.), ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ಅಧ್ಯಕ್ಷರು ಹಾಗೂ ಹೆಮ್ಮಾಡಿ ಘಟಕದ ಮಾಜಿ ಅಧ್ಯಕ್ಷರಾದ ಉದಯಕುಮಾರ್ ಹಟ್ಟಿಯಂಗಡಿ, ಮುಖ್ಯ ಅತಿಥಿ ನೆಲೆಯಲ್ಲಿ ಉಪಸ್ಥಿತರಿದ್ದರು.

ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಗಣೇಶ್ ಮೊಗವೀರ ಸಸಿಗಳನ್ನು ಸಂಕೇತಿಕವಾಗಿ ವಿತರಿಸಿದರು.

ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಇದರ ಪ್ರಧಾನ ಕಾರ್ಯದರ್ಶಿ ಶೇಖರ್ ತೋಳಾರ್ ಮರಾತೂರು,ಘಟಕದ ಕಾರ್ಯದರ್ಶಿ ಜಯಂತ್ ಕುಂದರ್ ಬಾಳಿಕೆರೆ, ಕೋಶಾಧಿಕಾರಿ ಸಂತೋಷ ಮೊಗವೀರ ಸುಳ್ಸೆ, ಘಟಕದ ಉಸ್ತುವಾರಿ ಪಾಂಡುರಂಗ ಬೈಂದೂರು, ಜಿಲ್ಲಾ ಸಂಘಟನೆಯ ಗೌರವ ಸಲಹೆಗಾರರಾದ ರಮೇಶ್ ಕುಂದರ್ ಕೋಟ, ನಿಕಟ ಪೂರ್ವ ಹಾಗೂ ಗೌರವ ಅಧ್ಯಕ್ಷರಾದ ದಿನೇಶ್ ಕಾಂಚನ್ ಬಾಳಿಕೆರೆ, ಮಾಜಿ ಅಧ್ಯಕ್ಷರಾದ ರಾಘವೇಂದ್ರ ನೆಂಪು, ಮೊಗವೀರ ಸ್ತ್ರೀಶಕ್ತಿ ಬಗ್ವಾಡಿ ಹೋಬಳಿಯ ಅಧ್ಯಕ್ಷರಾದ ಶ್ರೀಮತಿ ಬೇಬಿ. ಜಿ. ನಾಯ್ಕ್ ಹಾಗೂ ಸದಸ್ಯರು, ಹೆಮ್ಮಾಡಿ ಘಟಕದ ಗೌರವ ಸಲಹೆಗಾರರು, ಉಪಾಧ್ಯಕ್ಷರು, ಜಿಲ್ಲಾ ಸಂಘಟನೆಯ ಸದಸ್ಯರು, ಘಟಕದ ಸದಸ್ಯರು ಹಾಗೂ ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಭೋದಕ- ಭೋದಕೇತರ ಸಿಬ್ಬಂದಿಗಳು ಹಾಗೂ ಹಾಸ್ಟೆಲ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಹೆಮ್ಮಾಡಿ ಘಟಕದ ಮಾಜಿ ಅಧ್ಯಕ್ಷರಾದ ಲೋಹಿತಾಶ್ವ ಆರ್. ಕುಂದರ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!