spot_img
Sunday, July 19, 2026
spot_img

ಆತ್ರಾಡಿ ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ ಪದಗ್ರಹಣ 

ವಂಡ್ಸೆ :ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆ, ಅತ್ರಾಡಿಯಲ್ಲಿ ವಿದ್ಯಾರ್ಥಿ ಪರಿಷತ್ತಿನ ಪದಗ್ರಹಣ ಸಮಾರಂಭ ಇತ್ತೀಚಿಗೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಸಂಚಾಲಕರಾದ ಹಾಗೂ ಕಾರ್ಯದರ್ಶಿ ಸುಭಾಸ್ ಚಂದ್ರ  ಶೆಟ್ಟಿ ವಹಿಸಿದ್ದರು. ಸಮಾರಂಭವನ್ನು ನಿವೃತ್ತ ಶಿಕ್ಷಕರಾದ  ಮಂಜಯ್ಯ ಶೆಟ್ಟಿ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಡಾ. ಅತುಲ್ ಕುಮಾರ್ ಶೆಟ್ಟಿ, ಶ್ರೀ ಮೂಕಾಂಬಿಕಾ ದೇವಸ್ಥಾನ, ಕೊಲ್ಲೂರು ಮಾಜಿ ಟ್ರಸ್ಟಿ, ವಿದ್ಯಾರ್ಥಿ ನಾಯಕರಿಗೆ ಪದಗ್ರಹಣ ಮಾಡಿಸಿ, ಉತ್ತಮ ನಾಯಕತ್ವ, ಶಿಸ್ತು, ಜವಾಬ್ದಾರಿ ಹಾಗೂ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ಶಾಲಾ ನಾಯಕ, ಉಪನಾಯಕರು, ಹೌಸ್ ಕ್ಯಾಪ್ಟನ್‌ಗಳು ಹಾಗೂ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿ ತಮ್ಮ ಕರ್ತವ್ಯಗಳನ್ನು ನಿಷ್ಠೆಯಿಂದ ನಿರ್ವಹಿಸುವುದಾಗಿ ಪ್ರತಿಜ್ಞೆ ಮಾಡಿದರು.

ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ದೀಪಿಕಾ ಸುಭಾಷ್ ಶೆಟ್ಟಿ ಸ್ವಾಗತಿಸಿ, ವಿದ್ಯಾರ್ಥಿ ನಾಯಕತ್ವದ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದು, ನೂತನ ವಿದ್ಯಾರ್ಥಿ ಪರಿಷತ್ತಿಗೆ ಶುಭ ಹಾರೈಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!