spot_img
Tuesday, July 21, 2026
spot_img

ಮುರುಗನ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳದಿಂದ ರೂ.2 ಲಕ್ಷ ನೆರವು

ಕುಂದಾಪುರ: ಕೋಟೇಶ್ವರದ ಮಾರ್ಕೋಡುವಿನಲ್ಲಿರುವ ಮುರುಗನ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ರೂ.2 ಲಕ್ಷ ಅನುದಾನವನ್ನು ಮಂಜೂರು ಮಾಡಿದ್ದು, ಶ್ರೀ ಕ್ಷೇ.ಧ.ಗ್ರಾ ಯೋಜನೆಯ ತಾಲೂಕು ಯೋಜನಾಧಿಕಾರಿ ಸುಧೀರ್ ಹಂಗಳೂರು ದೇವಸ್ಥಾನದ ಆಡಳಿತ ಮೊಕ್ತೇಸರರು ಹಾಗೂ ವ್ಯವಸ್ಥಾಪನಾ ಸಮಿತಿಯವರಿಗೆ ಹಸ್ತಾಂತರಿಸಿದರು.

ಈ ಸಂದರ್ಭ ಮಾತನಾಡಿದ ಯೋಜನಾಧಿಕಾರಿ ಸುಧೀರ್ ಅವರು, ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಧರ್ಮೋತ್ಥಾನ ಟ್ರಸ್ಟ್ ಮೂಲಕ ದೇಣಿಗೆಯನ್ನು ಒದಗಿಸಿಕೊಡುತ್ತಿದ್ದಾರೆ. ಇದಲ್ಲದೇ ಯೋಜನೆಯ ಸದಸ್ಯರ ಹಾಗೂ ಸ್ಥಳೀಯರ ಸಹಕಾರದಿಂದ ಗ್ರಾಮದ ದೇವಸ್ಥಾನದ, ಚರ್ಚ್, ಮಸೀದಿಗಳ ಸ್ವಚ್ಛತೆಯನ್ನು ವಾರ್ಷಿಕವಾಗಿ 2 ಬಾರಿ ಮಾಡಲಾಗುತ್ತಿದ್ದು, ಕಸಗಳ ವಿಲೇವಾರಿಗೆ ಕಸದ ಡಬ್ಬಿಯನ್ನು ಕೂಡ ಒದಗಿಸಿಕೊಡಲಾಗಿದ್ದು, ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಚತೆಗೆ ಪ್ರಮುಖ ಆದ್ಯತೆ ನೀಡಲಾಗಿರುತ್ತದೆ. ತಾಲೂಕಿನಲ್ಲಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಕಳೆದ 5 ವರ್ಷಂದೀಚೆಗೆ ಒಟ್ಟು 92 ಲಕ್ಷದ 35 ಸಾವಿರ ಅನುದಾನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒದಗಿಸಿಕೊಡಲಾಗಿದ್ದು, ಇದು ನೆರವು ನೀಡುತ್ತಿರುವ ೩೮ನೇ ದೇವಸ್ಥಾನವಾಗಿದೆ ಎಂದು ತಿಳಿಸಿದರು.

ಮುರುಗನ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಧ್ಯಕ್ಷರಾದ ಸುರೇಂದ್ರ ಶೆಟ್ಟಿ, ಮಹತೋಭಾರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಗೋಪಾಲಕೃಷ್ಣ ಶೆಟ್ಟಿ, ಗೋಪಾಡಿ ಚಿಕ್ಕು ಅಮ್ಮ ಸಪರಿವಾರ ದೇವಸ್ಥಾನದ ಅದ್ಯಕ್ಷರಾದ ಶ್ರೀನಿವಾಸ ಕುಂದರ್, ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಸುಬ್ರಮಣ್ಯ ಶೆಟ್ಟಿ, ದೇವಸ್ಥಾನದ ಪ್ರಧಾನ ಅರ್ಚಕರಾದ ಮುರುಗನ್ ಸ್ವಾಮಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶಂಕರ ಶೆಟ್ಟಿ, ಸುರೇಶ್ ಜೋಗಿ, ಜಯರಾಮ ಶೆಟ್ಟಿ, ವಿಷ್ಣುದಾಸ ಭಟ್, ಸುಬ್ಬಣ್ಣ ಶೆಟ್ಟಿ, ರಂಗನಾಥ ಭಟ್, ರತ್ನಾಕರ, ಕೋಟೇಶ್ವರ ಎ ಒಕ್ಕೂಟದ ಅಧ್ಯಕ್ಷರಾದ ಕೆ ರಾಮ, ಕೋಟೇಶ್ವರ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ಶಾಂತ ಗೋಪಾಲಕೃಷ್ಣ, ವಲಯ ಮೇಲ್ವಿಚಾರಕರಾದ ರೋಹಿಣಿ ಎ.ಎನ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಕವಿತಾ ಗೌಡ, ಸ್ಥಳೀಯ ಸೇವಾಪ್ರತಿನಿಧಿಗಳಾದ ಜಯಂತಿ ಶೆಟ್ಟಿ ಹಾಗೂ ಸುಶೀಲಾ ಕೆ ಎಸ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!