spot_img
Thursday, July 23, 2026
spot_img

ಬೀಜಾಡಿ ಸೀತಾಲಕ್ಷ್ಮೀ ಮತ್ತು ಬಿ.ಎಂ ರಾಮಕೃಷ್ಣ ಹತ್ವಾರ್ ಸರಕಾರಿ ಪ್ರೌಢಶಾಲೆಯ ಸಭಾಭವನ ನಿರ್ಮಾಣಕ್ಕೆ ಧರ್ಮಸ್ಥಳದಿಂದ ರೂ.1.50 ಲಕ್ಷ ನೆರವು

ಕುಂದಾಪುರ: ಬೀಜಾಡಿಯ ಸೀತಾಲಕ್ಷ್ಮೀ ಮತ್ತು ಬಿ.ಎಂ ರಾಮಕೃಷ್ಣ ಹತ್ವಾರ್ ಸರಕಾರಿ ಪ್ರೌಢಶಾಲೆಯ ಸಭಾಭವನ ನಿರ್ಮಾಣಕ್ಕೆ ಶ್ರೀ ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ರೂ.1.50 ಲಕ್ಷ ಅನುದಾನವನ್ನು ಮಂಜೂರು ಮಾಡಿದ್ದು, ಕುಂದಾಪುರ ತಾಲೂಕು-2 ಯೋಜನಾಧಿಕಾರಿ ಸುಧೀರ್ ಹಂಗಳೂರು ಹಾಗೂ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಸುಬ್ರಹ್ಮಣ್ಯ ಶೆಟ್ಟಿ ಅವರು ಶಾಲಾ ಕಟ್ಟಡ ರಚನಾ ಸಮಿತಿ ಹಾಗೂ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು.

ಈ ಬಗ್ಗೆ ಸಂದರ್ಭದಲ್ಲಿ ಮಾತನಾಡಿದ ಯೋಜನಾಧಿಕಾರಿ ಸುಧೀರ್ ಅವರು, ಶಾಲೆಗಳ ತರಗತಿ ಕೊಠಡಿ ನಿರ್ಮಾಣಕ್ಕೆ, ಶಾಲಾ ಸಭಾಭವನ ನಿರ್ಮಾಣಕ್ಕೆ, ಶಾಲಾ ಶೌಚಾಲಯ ನಿರ್ಮಾಣಕ್ಕೆ, ಹಲವಾರು ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಅನುದಾನವನ್ನು ಒದಗಿಸಿಕೊಡಲಾಗುತ್ತಿದೆ. ಇಷ್ಟೇ ಅಲ್ಲದೇ ಮಕ್ಕಳು ಸರಿಯಾಗಿ ಕುಳಿತು ಪಾಠವನ್ನು ಕೇಳಲು ಅನುಕೂಲವಾಗುವಂತೆ ಬೆಂಚು ಡೆಸ್ಕ್‍ಗಳ ಒದಗಣೆ, ಶಿಕ್ಷಕರಿಲ್ಲದ ಅಗತ್ಯ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರ ನೇಮಕಾತಿಯನ್ನ ಕೂಡ ಮಾಡಲಾಗುತ್ತಿದೆ. ಇದರೊಂದಿಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆಗೊಳ್ಳಲು ಸಹಕಾರಿಯಾಗುವಂತೆ ವಾರ್ಷಿಕ 03 ತಿಂಗಳುಗಳ ಕಾಲ ಶಾಲಾ ಎಲ್ಲಾ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ಕ್ಲಾಸ್‍ನ್ನು ಕೂಡ ಯೋಜನೆಯ ವತಿಯಿಂದ ನೀಡಲಾಗುತ್ತಿದೆ. ವರ್ಷಂದೀಚೆಗೆ ಒಟ್ಟು 45 ಲಕ್ಷದ 25 ಸಾವಿರ ಅನುದಾನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒದಗಿಸಿಕೊಡಲಾಗಿದ್ದು, ಇದು ನೆರವು ನೀಡುತ್ತಿರುವ 16ನೇ ಶಾಲೆಯಾಗಿದೆ ಎಂದು ತಿಳಿಸಿದರು.

ಈ ಸಂದರ್ಭ ಶಾಲಾ ಕಟ್ಟಡ ರಚನಾ ಸಮಿತಿಯ ಅಧ್ಯಕ್ಷರಾದ ಶೇಖರ ಛಾತ್ರಬೆಟ್ಟು, ಕಟ್ಟಡ ರಚನಾ ಸಮಿತಿಯ ಖಜಾಂಚಿ ಬಾಬಣ್ಣ ಪೂಜಾರಿ, ಕಟ್ಟಡ ಸಮಿತಿಯ ಉಪಾಧ್ಯಕ್ಷರಾದ ಎಲ್.ವಿ ನಾಯ್ಕ್, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀನಿವಾಸ, ಶಾಲಾ ಮುಖ್ಯೋಪಾಧ್ಯಾಯರಾದ ವಿನೋದ ಎಂ, ಶಾಲಾ ಶಿಕ್ಷಕರಾದ ಅಪರ್ಣಾ ಬಾಯಿ, ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಶೆಟ್ಟಿ, ಪ್ರಗತಿಬಂಧು ಸ್ವಸಹಾಯ ಸಂಘಗಳ ವಲಯಾಧ್ಯಕ್ಷರಾದ ಬಸವರಾಜು, ಬೀಜಾಡಿ ಕುಂದಾಪುರ ಒಕ್ಕೂಟ ಅಧ್ಯಕ್ಷರಾದ ಸವಿತಾ, ಮೇಲ್ವಿಚಾಕರಾದ ರೋಹಿಣಿ ಎ ಎನ್, ಸೇವಾಪ್ರತಿನಿಧಿ ಶಾಲಿನಿ, ಸ್ಥಳಿಯ ಒಕ್ಕೂಟದ ಪದಾಧಿಕಾರಿಗಳು ಹಾಗೂ ಶಾಲಾ ಶಿಕ್ಷಕವೃಂದದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!