spot_img
Thursday, July 23, 2026
spot_img

ಬಿ.ಬಿ.ಹೆಗ್ಡೆ ಕಾಲೇಜು: ಪ್ರೇರಣಾ ಶಿಬಿರ: ‘ನಡವಳಿಕೆ ಹಾಗೂ ಶಿಸ್ತು’ ವಿಶೇಷ ಉಪನ್ಯಾಸ

ಕುಂದಾಪುರ: ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕಾದರೆ ದೃಢ ಸಂಕಲ್ಪವನ್ನು ಹೊಂದಬೇಕು, ಉತ್ತಮ ನಡವಳಿಕೆ ಹಾಗೂ ಶಿಸ್ತನ್ನು ಬದುಕಿನಲ್ಲಿ ಅಳವಡಿಸಿಕೊಂಡು ತಮ್ಮ ಹೆತ್ತವರಿಗೆ, ಕಲಿತ ಶಿಕ್ಷಣ ಸಂಸ್ಥೆಗೆ ಹಾಗೂ ಸಮಾಜಕ್ಕೆ ಕೀರ್ತಿ ತರಬೇಕು ಎಂದು ಸಿದ್ದಾಪುರದ ಜ್ಞಾನ ಸರಸ್ವತಿ ಪದವಿ-ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಅಮರೇಶ್ ಹೆಗ್ಡೆ ಹೇಳಿದರು.

ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಐಕ್ಯೂ‌ಎಸಿ ಘಟಕ ಹಮ್ಮಿಕೊಂಡ ‘ಪ್ರೇರಣಾ’ ಶಿಬಿರದಲ್ಲಿ ‘ನಡವಳಿಕೆ ಹಾಗೂ ಶಿಸ್ತು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಕಾಲೇಜಿನ ಐಕ್ಯೂ‌ಎಸಿ ಸಂಯೋಜಕರಾದ ದೀಪಿಕಾ ಜಿ., ಐಕ್ಯೂ‌ಎಸಿ ಸಹ ಸಂಯೋಜಕರಾದ ರಕ್ಷಿತ್ ರಾವ್ ಗುಜ್ಜಾಡಿ ಹಾಗೂ ಶೈಕ್ಷಣಿಕ ನಿಕಾಯಕರಾದ ತಿಮ್ಮಪ್ಪ ಡಿ.ಎಸ್. ಉಪಸ್ಥಿತರಿದ್ದರು.

ವ್ಯವಹಾರ ಆಡಳಿತ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ಅತಿಥಿಗಳನ್ನು ಪರಿಚಯಿಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರಶ್ಮಿತಾ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!