spot_img
Friday, July 24, 2026
spot_img

ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪ್ರಥಮ ವರ್ಷದ ಬಿ.ಇ. ವಿದ್ಯಾರ್ಥಿಗಳ ಇಂಡಕ್ಷನ್ ಕಾರ್ಯಕ್ರಮ

ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MITK) ಇಂಜಿನಿಯರಿಂಗ್ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಬಿ.ಇ. ವಿದ್ಯಾರ್ಥಿಗಳ ದಿಕ್ಸೂಚಿ ಕಾರ್ಯಕ್ರಮ (Student Induction Programme) ಬುಧವಾರದಂದು ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮದ ಉದ್ಘಾಟಕರಾಗಿ ಭಾಗವಹಿಸಿ ಮಾತನಾಡಿದ ಆರಾಕಲ್ (Oracle) ಸಂಸ್ಥೆಯ ಹೆಚ್.ಆರ್. ಅಲೆಕ್ಸಾಂಡರ್ ಆರ್, “ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದಿಂದ ಉದ್ಯೋಗಗಳು ನಷ್ಟವಾಗುವುದಿಲ್ಲ. ಬದಲಿಗೆ ಅದನ್ನು ಸರಿಯಾಗಿ ಬಳಸಿಕೊಳ್ಳಲು ತಿಳಿದಿರುವವರು ಭವಿಷ್ಯದಲ್ಲಿ ಉದ್ಯೋಗಾವಕಾಶಗಳನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಕೇವಲ ಸಂವಹನ ನಡೆಸುವುದಷ್ಟೇ ಅಲ್ಲದೆ, ಉತ್ತಮ ಬಾಂಧವ್ಯ ಬೆಳೆಸಿಕೊಳ್ಳುವ ಕೌಶಲ್ಯ ಹಾಗೂ ನಿರಂತರ ಕಲಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗ್ಡೆ ಅವರು ಸಂಸ್ಥೆಯ ಧ್ಯೇಯೋದ್ದೇಶಗಳನ್ನು ವಿವರಿಸಿ, “ಸಮಾಜದಲ್ಲಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇಂಜಿನಿಯರಿಂಗ್ ಶಿಕ್ಷಣ ಅತ್ಯಗತ್ಯ. ವಿದ್ಯಾರ್ಥಿಗಳು ಉತ್ತಮ ಇಂಜಿನಿಯರ್ ಆಗಿ ಹೊರಹೊಮ್ಮಿ ಸಮಾಜಕ್ಕೆ ಸಕಾರಾತ್ಮಕ ಕೊಡುಗೆ ನೀಡಬೇಕು” ಎಂದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿದ
IMJ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ಎಸ್. ಎನ್. ಭಟ್ ಮಾತನಾಡಿ, ನೀವು ಯಾವ ವಿಭಾಗ ಆಯ್ಕೆ ಮಾಡಿದ್ದೀರಿ ಅದರ ಜ್ಞಾನದ ಜೊತೆಗೆ ಇತರ ಕ್ಷೇತ್ರಗಳ ಜ್ಞಾನವನ್ನೂ ಮೈಗೂಡಿಸಿಕೊಂಡು ಸಂಸ್ಥೆಗೆ ಕೀರ್ತಿ ತರಲು ಪ್ರಯತ್ನಿಸಿ, ಅದಕ್ಕೆ ಪೂರಕವಾದ ವಾತಾವರಣ ಇಲ್ಲಿದೆ ಎಂದು ವಿವರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಂಸ್ಥೆಯ ಸಂಶೋಧನಾ ಡೀನ್ ಡಾ. ವಿನೋದ್ ಕುಮಾರ್ ಮಾತನಾಡಿ, ಮುಂದಿನ ನಾಲ್ಕು ವರ್ಷಗಳ ಇಂಜಿನಿಯರಿಂಗ್ ಅಭ್ಯಾಸವನ್ನು ಶ್ರದ್ಧೆಯಿಂದ ನಿರ್ವಹಿಸಿದರೆ ಭವಿಷ್ಯದ ಜೀವನ ಸುಂದರವಾಗಲಿದೆ ಎಂದು ಕಿವಿಮಾತು ಹೇಳಿದರು.
ವಿದ್ಯಾರ್ಥಿ ಕ್ಷೇಮಪಾಲನಾ ಸಂಯೋಜಕರಾದ ಶ್ರೀಮತಿ ಸೂಕ್ಷ್ಮ ಅಡಿಗ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರನ್ನು ಹಾಗೂ ಪೋಷಕರನ್ನು ಸ್ವಾಗತಿಸಿದರು.IQAC ಸಂಯೋಜಕರಾದ ಡಾ. ನಿಖಿಲ ಪೈ ವಂದಿಸಿದರು. ವಿದ್ಯಾರ್ಥಿನಿ ಅಲಿಶಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು, ಪೋಷಕರು ಹಾಗೂ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!