spot_img
Friday, July 24, 2026
spot_img

ಕೋಡಿ: ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಶಾಲೆ : ವಿದ್ಯಾರ್ಥಿ ಮಂತ್ರಿಮಂಡಲ ಸಮಾರಂಭ

 

ಕೋಡಿ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಶಾಲೆಯ 2026-27ನೇ ಶೈಕ್ಷಣಿಕ ವರ್ಷದ ಶಿಕ್ಷಕ – ರಕ್ಷಕ ಸಭೆ, ಶಾಲಾ ವಿದ್ಯಾರ್ಥಿಗಳ ಮಂತ್ರಿಮಂಡಲ ಸಮಾರಂಭ (Investiture Ceremony)  ಹಾಗೂ ಮಾದಕ ವ್ಯಸನ ಮುಕ್ತ ಕಾರ್ಯಕ್ರಮವು 21 ಜುಲೈ 2026ರಂದು ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕುಂದಾಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಜಯರಾಮ್ ಡಿ. ಗೌಡ ಭಾಗವಹಿಸಿ,  ವಿದ್ಯಾರ್ಥಿ ನಾಯಕರನ್ನು ಉದ್ದೇಶಿಸಿ ಮಾತನಾಡಿ, ಶಿಸ್ತು, ನೈತಿಕ ಮೌಲ್ಯಗಳು ಹಾಗೂ ಜೀವನ ಕೌಶಲ್ಯಗಳ ಮಹತ್ವವನ್ನು ತಿಳಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶವನ್ನು ನೀಡುವುದರೊಂದಿಗೆ, ದೇಶದ ಬೆನ್ನೆಲುಬಾಗಿರುವ ಯುವ ಸಮುದಾಯವು ನಶೆಯ ದಾರಿಗೆ ಬಿದ್ದು ತಮ್ಮ ಅಮೂಲ್ಯವಾದ ಭವಿಷ್ಯವನ್ನು ಹಾಳು ಮಾಡಿಕೊಳ್ಳಬಾರದು. ಬದಲಿಗೆ, ತಮ್ಮ ಗುರಿಯತ್ತ ಗಮನಹರಿಸಿ, ಸಶಕ್ತ ಮತ್ತು ಆರೋಗ್ಯವಂತ ಸಮಾಜವನ್ನು ಕಟ್ಟಲು ಮುಂದಾಗಬೇಕು ಎಂದು ತಿಳಿಸಿದರು.
ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಉದ್ದೇಶದಿಂದ ಪೋಕ್ಸೋ (POCSO) ಕಾಯ್ದೆಯ ಕುರಿತು ಮಾಹಿತಿ ನೀಡಿ, ವಿದ್ಯಾರ್ಥಿಗಳು ಯಾವುದೇ ರೀತಿಯ ಕಿರುಕುಳ ಅಥವಾ ದೌರ್ಜನ್ಯ ಎದುರಾದರೆ ಧೈರ್ಯದಿಂದ ಪೋಷಕರು, ಶಿಕ್ಷಕರು ಅಥವಾ ಪೊಲೀಸರಿಗೆ ತಕ್ಷಣ ಮಾಹಿತಿ ನೀಡುವಂತೆ ಅವರು ಕರೆ ನೀಡಿದರು. ಶಾಲಾ ಸಂಸತ್ತು ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ಸಮಿತಿಯ ಸಚಿವರ ಹೆಸರುಗಳನ್ನು ಘೋಷಿಸಲಾಯಿತು. ವಿದ್ಯಾರ್ಥಿ ಸಂಸತ್ತಿನ ಸದಸ್ಯರು ಶಾಲೆಯ ಅಭಿವೃದ್ಧಿ ಮತ್ತು ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರಾಮಾಣಿಕತೆ, ಜವಾಬ್ದಾರಿ ಹಾಗೂ ಶಿಸ್ತಿನಿಂದ ಸೇವೆ ಸಲ್ಲಿಸುವುದಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಹಾಗೂ ಶಾಲೆಯ ಪಾಂಶುಪಾಲೆ ಅಶ್ವಿನಿ ಶೆಟ್ಟಿ ಸಂಸ್ಥೆಯ ಶೈಕ್ಷಣಿಕ ದೃಷ್ಟಿಕೋನ ಹಾಗೂ ಪ್ರಸಕ್ತ ಸಾಲಿನ ಶೈಕ್ಷಣಿಕ ಯೋಜನೆಗಳನ್ನು ಪೋಷಕರಿಗೆ ವಿವರಿಸಿದರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ಡಾ. ಆಸಿಫ್ ಬ್ಯಾರಿ ಪೋಷಕರನ್ನು ಉದ್ದೇಶಿಸಿ ಮಾತನಾಡಿ, ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ ಶಾಲೆ ಮತ್ತು ಪೋಷಕರ ಸಹಭಾಗಿತ್ವದ ಮಹತ್ವವನ್ನು ತಿಳಿಸಿದರು. ಹಿಸ್ ಗ್ರೇಸ್ ಮಾಂಟೆಸ್ಸರಿಯ ಶಿಕ್ಷಕಿ ಗಾಯತ್ರಿ ಮಾಂಟೆಸ್ಸರಿ ಬೋಧನಾ ವಿಧಾನ ಕುರಿತು ಮಾಹಿತಿ ನೀಡಿದರು.
ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆಯಾದ ಝೀಯಾ ಹಾಗೂ ಅಕಾಡೆಮಿಕ್ ಡೀನ್ ಪೂರ್ಣಿಮ ಶೆಟ್ಟಿ, ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಶಾಲೆಯ ಉಪಪ್ರಾಂಶುಪಾಲೆ ಶ್ರೀಮತಿ ಜನಿಫರ್ ಲೂಯಿಸ್ ಉಪಸಿತರಿದ್ದರು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅಲೀನ ಜಿಮಾನ್ ಸ್ವಾಗತಿಸಿ, ಶಿಕ್ಷಕಿ ಜನಿಫರ್ ಲೂಯಿಸ್ ವಂದಿಸಿದರು. ಶಿಕ್ಷಕಿ ಲಮೀಝ್ ಹಾಗೂ ಹತ್ತನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಐಝಾ ನಾಝ್ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!