spot_img
Friday, July 24, 2026
spot_img

ಎಕ್ಸಲೆಂಟ್ ಕುಂದಾಪುರ: ಸಿಎ, ಸಿಎಸ್ ಓರಿಯೆಂಟೇಶನ್ ಕಾರ್ಯಕ್ರಮ ಉದ್ಘಾಟನೆ

ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಆಭರಣದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಅಗತ್ಯವಾದ ಸಿಎ,ಸಿಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮವು ದಿನಾಂಕ 21/07/2026 ರಂದು ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಜ್ಯದ ಖ್ಯಾತ ಲೆಕ್ಕ ಪರಿಶೋಧಕರಾದ ಸಿಎ ಪಾಂಡುರಂಗ ನಾಯಕ್ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಕುರಿತು ಮಾತನಾಡಿ ಸಿಎ, ಸಿಎಸ್ ಕೋರ್ಸುಗಳನ್ನು ಏಕೆ ತೆಗೆದುಕೊಳ್ಳಬೇಕು, ಅಷ್ಟೇ ಅಲ್ಲದೆ ಇಂತಹ ಕೋರ್ಸ್ ಗಳನ್ನು ತೆಗೆದುಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೇಗೆ ಅಣಿಯಾಗಬೇಕು ಎಂಬುದನ್ನು ತನ್ನ ಅನುಭವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಅಧ್ಯಕ್ಷರಾದ ಎಂ. ಮಹೇಶ್ ಹೆಗ್ಡೆಯವರು ಮಕ್ಕಳಿಗೆ ಇಂತಹ ಕೋರ್ಸುಗಳ ಅಗತ್ಯತೆಯ ಬಗ್ಗೆ ಮಾಹಿತಿಯನ್ನು ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ  ಸಿಎ,ಸಿಎಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹಿಂದಿನ ಮಕ್ಕಳ ಸಾಧನೆಯನ್ನು ಕೊಂಡಾಡಿದರು. ಅದಕ್ಕಿಂತಲೂ ಹೆಚ್ಚಿನ ಫಲಿತಾಂಶ ಈ ವರ್ಷವೂ ಬರಬೇಕು ಎಂದು ಶುಭ ಕೋರಿದರು. ಹಾಗೆಯೇ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಅಕ್ಷತಾ ಎಂ ಮಾತನಾಡಿ ತಮ್ಮ ಮುಂದಿನ ಸಿಎ,ಸಿಎಸ್ ಕೋರ್ಸುಗಳ ವಾರ್ಷಿಕ ಯೋಜನೆಯನ್ನು ವಿಸ್ತಾರವಾಗಿ ಹೇಳುವುದರ ಮೂಲಕ ಎಲ್ಲ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಸಿದರು.
ವಾಣಿಜ್ಯ ವಿಭಾಗದ ಆಂಗ್ಲ ಉಪಾನ್ಯಾಸಕ ರಸಿಕ್ ಶೆಟ್ಟಿ ನಿರೂಪಣೆ ಮಾಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!