spot_img
Friday, July 24, 2026
spot_img

ಡಾ| ಬಿ. ಬಿ. ಹೆಗ್ಡೆ ಕಾಲೇಜು: ನುಡಿ ನಮನ

ಕುಂದಾಪುರ (ಜುಲೈ 20): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ಕ್ಷೇಮಪಾಲನಾ ಸಮಿತಿಯ ಆಶ್ರಯದಲ್ಲಿ ನುಡಿ ನಮನ ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.
ಕಳೆದ 16 ವರ್ಷಗಳಿಂದ ಕಾಲೇಜಿನಲ್ಲಿ ಹಿಂದಿ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ ಡಾ. ದೀಪಾ ಹಾಗೂ ದ್ವಿತೀಯ ಬಿಸಿಎ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸುದೀಪ್ ಶೆಟ್ಟಿ ಅವರು ಅಕಾಲಿಕವಾಗಿ ಮರಣ ಹೊಂದಿದ ಹಿನ್ನೆಲೆಯಲ್ಲಿ ನುಡಿ ನಮನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಮಾತನಾಡಿ, ಸಂಸ್ಥೆಗೆ ಡಾ. ದೀಪಾ ಅವರು ಸಲ್ಲಿಸಿದ ಸೇವೆ ಸ್ಮರಣೀಯ. ನಂದಾದೀಪದಂತೆ ಎಲ್ಲರೊಂದಿಗೆ ಬೆರೆತು ಬದುಕಿದ ಅವರ ಬದುಕಿನ ನಡೆ ಉಲ್ಲೇಖನೀಯ. ಮೃತ ವಿದ್ಯಾರ್ಥಿ ಸುದೀಪ್ ಶೆಟ್ಟಿ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು, ಕಾಲೇಜಿನ ಸಾಂಸ್ಕೃತಿಕ ಮತ್ತು ಇನ್ನಿತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡವರು. ಇಬ್ಬರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದರು.
ಸಂಸ್ಥೆಯ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿ, ನುಡಿ ನಮನ ಸಲ್ಲಿಸಿದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಮಹೇಶ್ ಕುಮಾರ್, ವಿದ್ಯಾರ್ಥಿನಿ ಲಾವಣ್ಯ ಪೂಜಾರಿ ಅನಿಸಿಕೆ ಹಂಚಿಕೊಂಡರು. ಈ ಸಂದರ್ಭ ಆಡಳಿತ ನಿಕಾಯಕ ರಕ್ಷಿತ್ ರಾವ್ ಗುಜ್ಜಾಡಿ, ಶೈಕ್ಷಣಿಕ ನಿಕಾಯಕ ತಿಮ್ಮಪ್ಪ ಡಿ.ಎಸ್. ಹಾಗೂ ಸಿಬ್ಬಂದಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ಮಹೇಶ್ ನಾಯ್ಕ್ ಉಪಸ್ಥಿತರಿದ್ದರು.
ಕನ್ನಡ ಸಹಾಯಕ ಪ್ರಾಧ್ಯಾಪಕಿ ರಶ್ಮಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಹಿಂದಿ ವಿಭಾಗದ ಮುಖ್ಯಸ್ಥೆ ರೇವತಿ ಡಿ.ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!