spot_img
Saturday, July 25, 2026
spot_img

ಬಗ್ವಾಡಿ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ಉತ್ತಮ ಮಳೆಗಾಗಿ ಪ್ರಾರ್ಥಿಸಿ ಸೀಯಾಳ ಅಭಿಷೇಕ

ಕುಂದಾಪುರ: ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ಸಮೃದ್ಧ ಮಳೆ, ಬೆಳೆಗಾಗಿ ಪ್ರಾರ್ಥಿಸಿ ಗ್ರಾಮಸ್ಥರು ಹಾಗೂ ದೇವಿಯ ಭಕ್ತಾದಿಗಳಿಂದ ಸಾಮೂಹಿಕ ಸೀಯಾಳ ಅಭಿಷೇಕ ಶುಕ್ರವಾರ ನಡೆಯಿತು.

ಬೆಳಿಗ್ಗೆಯಿಂದ ಮಧ್ಯಾಹ್ನ ತನಕ ಸೀಯಾಳ ಅಭಿಷೇಕ ನಡೆಯಿತು. ಸುಮಾರು 851 ಸೀಯಾಳಗಳಿಂದ ದೇವಿಗೆ ಅಭಿಷೇಕ ಮಾಡಲಾಯಿತು. ನಾಡಿಗೆ ಉತ್ತಮ ಮಳೆಯಾಗಿ, ಸಮೃದ್ಧ ಬೆಳೆಯಾಗುವಂತೆ ಪ್ರಾರ್ಥನೆ ಮಾಡಲಾಯಿತು.

ದೇವಸ್ಥಾನದ ಅರ್ಚಕರಾದ ಗಿರೀಶ ಭಟ್ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಿತು. ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ಅಧ್ಯಕ್ಷರಾದ ಉದಯ ಕುಮಾರ್ ಹಟ್ಟಿಯಂಗಡಿ, ಕಾರ್ಯದರ್ಶಿ ಪ್ರಭಾಕರ ಹಾಗೂ ಗ್ರಾಮದ ಗಣ್ಯರು, ಗ್ರಾಮಸ್ಥರು, ಸಂಘ ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!