spot_img
Monday, July 27, 2026
spot_img

ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್

 

ಕುಂದಾಪುರ (ಜುಲೈ 26): ವೀರ ಸೈನಿಕರ ತ್ಯಾಗ ಮತ್ತು ಬಲಿದಾನವನ್ನು ನೆನಪಿಸುವುದರ ಜೊತೆಗೆ ದೇಶದ
ಐತಿಹಾಸಿಕ ಗೆಲುವಿಗೆ ಅಭಿನಂದನೆ ಸಲ್ಲಿಸಲು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಘಟಕದ
ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು.
ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸಿದ ಯೋಧ ಯೋಗೀಶ್ ಕಾಂಚನ್ ಅವರು ಕಾರ್ಗಿಲ್ ಯುದ್ಧದಲ್ಲಿ
ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯ ಪತಾಕೆ ಹಾರಿಸಿದ ದಿನವನ್ನು ನೆನಪಿಸಿಕೊಳ್ಳುವುದು,
ಸಂಭ್ರಮಿಸುವುದು ಮತ್ತ ಭಾರತೀಯ ಸೈನ್ಯದ ಶೌರ್ಯ ಸಾಹಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವುದು ನಮ್ಮ
ಕರ್ತವ್ಯ ಎಂದರು. ಇದೇ ಸಂದರ್ಭ ವಿದ್ಯಾರ್ಥಿಗಳು ದೇಶ ಪ್ರೇಮದ ಭಾವನೆಯನ್ನು ಎಲ್ಲಾ ನೆಲೆಯಲ್ಲಿಯೂ
ಬೆಳೆಸಿಕೊಳ್ಳಬೇಕಾಗಿರುವುದು ವರ್ತಮಾನದ ತುರ್ತು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ
ವಹಿಸಿದ್ದರು. ಎನ್.ಸಿ.ಸಿ. ಕೇರ್ ಟೇಕರ್ ತಿಮ್ಮಪ್ಪ ಡಿ.ಎಸ್. ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಯೋಜಕರಾದ ಹರೀಶ್ ಬಿ. ಸ್ವಾಗತಿಸಿದರು. ಎನ್.ಸಿ.ಸಿ. ಕೆಡೆಟ್‌ಗಳಾದ
ಸಿಂಚನಾ, ಚೈತ್ರ ಪ್ರಾರ್ಥಿಸಿ, ರೇಷ್ಮಾ ಒ ವಂದಿಸಿ, ಮಹೇಶ್ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!