spot_img
Monday, July 27, 2026
spot_img

ಬಿ. ಬಿ. ಹೆಗ್ಡೆ ಕಾಲೇಜು: ಸಿಬ್ಬಂದಿ ಕ್ಷೇಮಪಾಲನಾ ಸಮಿತಿಯ ವಾರ್ಷಿಕ ಸಭೆ

 

ಕುಂದಾಪುರ (ಜು.25): ಸಾಂಸ್ಥಿಕ ಬೆಳವಣಿಗೆಯಲ್ಲಿ ಪ್ರಾಮಾಣಿಕವಾಗಿ, ಸೃಜನಶೀಲವಾಗಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ವರ್ಗ ಬಹಳ ಮುಖ್ಯ. ಸಿಬ್ಬಂದಿ ಸಂಘದ ಮುಖೇನ ನಾವೆಲ್ಲರೂ ಸಮಾನ ಮನಸ್ಕರಾಗಿ ದುಡಿದಾಗ ಸಂಸ್ಥೆಯ ಯಶಸ್ಸು ಸಾಧ್ಯ ಎಂದು ಕಾಲೇಜಿನ ಪಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ, ಕಾಲೇಜಿನ ಸಿಬ್ಬಂದಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ವಾರ್ಷಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಸಿಬ್ಬಂದಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ, ಕಾರ್ಯಕ್ರಮದ ಸಂಯೋಜಕ ಮಹೇಶ್ ನಾಯ್ಕ್ ವಾರ್ಷಿಕ ಆಯ-ವ್ಯಯ ಪಟ್ಟಿ ವಾಚಿಸಿದರು . ಈ ಸಂದರ್ಭ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿದ ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರವೀನಾ ಸಿ.
ಪೂಜಾರಿಯವರಿಗೆ ಗೌರವಿಸಿ ಬೀಳ್ಕೊಡಲಾಯಿತು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ವಿ. ಭಟ್, ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸ್ವಾತಿ ಜಿ. ರಾವ್ ಅನಿಸಿಕೆ ಹಂಚಿಕೊಂಡರು. ಕಾಲೇಜಿನ ಗಣಿತಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ನಿರ್ಮಲಾ ಬಿಲ್ಲವ ಪ್ರಾರ್ಥಿಸಿ, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಸತೀಶ್ ಶೆಟ್ಟಿ ಹೆಸ್ಕತ್ತೂರು ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!