spot_img
Monday, July 27, 2026
spot_img

ಬಸ್ರೂರು: ವಿವಿಧ ಸಂಘಗಳ ಉದ್ಘಾಟನೆ  ಹಾಗೂ ಪ್ರತಿಭಾ ಪ್ರದರ್ಶನ

ಶ್ರೀ ಶಾರದಾ ಪದವಿ ಪೂರ್ವ ಕಾಲೇಜು, ಬಸ್ರೂರು. ದಿನಾಂಕ 18/07/2026 ರಂದು 2026-27 ನೆ ಶೈಕ್ಷಣಿಕ ಸಾಲಿನ ವಿವಿಧ ಸಂಘಗಳ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಕಾಲೇಜಿನ ಬಿ ವೀರ ರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಜರುಗಿತು. ವಿವಿಧ ಸಂಘಗಳ ಉದ್ಘಾಟನೆ ಮಾಡಿದ ಕಾಲೇಜಿನ ಸಂಚಾಲಕರಾದ ಅನುಪಮ ಎಸ್ ಶೆಟ್ಟಿ ಮಾತನಾಡಿ, ಕಾಲೇಜಿನಲ್ಲಿ ಪಠ್ಯದ
ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ನಡೆಸುವುದಕ್ಕೆ ಸಂಘಗಳು ಬಹಳ ಮುಖ್ಯ. ವಿದ್ಯಾರ್ಥಿಗಳು ತಮ್ಮನ್ನು ಸಂಪೂರ್ಣವಾಗಿ ಕಾಲೇಜು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಮುಂದಿನ ದಿನಗಳಲ್ಲಿ ಉತ್ತಮ ನಾಯಕರಾಗಲು ಸಹಾಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಮುಖ್ಯ ಅತಿಥಿಯಾಗಿ ಶ್ರೀ ಶಾರದಾ ಕಾಲೇಜಿನ ಪ್ರಾಂಶುಪಾಲರು ಡಾ. ದಯಾನಂದ ಎನ್., ಮಾತನಾಡಿದರು.

ಶ್ರೀ ಶಾರದಾ  ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಡಾ. ಮೋಹನ್ ಕೆ.ಎನ್., ಅಧ್ಯಕ್ಷತೆ ವಹಿಸಿದ್ದರು.  ಕುಂದಾಪ್ರ ಕನ್ನಡ ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ ಹಾಗೂ ಸುಜ್ಞಾನ ಪಿ.ಯು ಕಾಲೇಜು, ಕುಂದಾಪುರ ತಾಲೂಕು ಜಂಟಿ ಪ್ರಸ್ತುತಿಯಲ್ಲಿ ಆಯೋಜಿಸಿದ್ದ ಕುಂದಾಪ್ರ ಕನ್ನಡ ವಾಲ್ಬೇಲ್ಲ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾಗಿ ಬಹುಮಾನ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಸಾಂಸ್ಕೃತಿಕ ಸಂಘದ ಸಂಯೋಜಕರು, ರಾಜ್ಯಶಾಸ್ತ್ರ ಉಪನ್ಯಾಸಕಿ ಪ್ರತಿಮಾ ಸ್ವಾಗತಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ಅಕ್ಷಯ್ ಹೆಗ್ಡೆ ಮೊಳಹಳ್ಳಿ ನಿರೂಪಿಸಿದರು, ಕನ್ನಡ ಉಪನ್ಯಾಸಕಿ ರಾಧಾ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!