spot_img
Tuesday, July 28, 2026
spot_img

ಸುಜ್ಞಾನ ಪಿಯು ಕಾಲೇಜಿನಲ್ಲಿ ಕೃಷಿ, ಪಶುವೈದ್ಯಕೀಯ ವಿಜ್ಞಾನ ಕಾರ್ಯಾಗಾರ

ಕುಂದಾಪುರ: ಇಲ್ಲಿನ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಬಿ.ಎಸ್ಸಿ ‘ಕೃಷಿ ಮತ್ತು ಪಶುವೈದ್ಯಕೀಯ ವಿಜ್ಞಾನ’ ಕೋರ್ಸ್ ಗಳ ಭವಿಷ್ಯ ಹಾಗೂ ಉದ್ಯೋಗಾವಕಾಶಗಳ ಕುರಿತು ವಿಶೇಷ ಮಾರ್ಗದರ್ಶನ ಕಾರ್ಯಾಗಾರ ಇತ್ತೀಚೆಗೆ ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದ ಹೆಸರಾಂತ ಕೃಷಿ ಶಿಕ್ಷಣ ತಜ್ಞ ರಾಜು ಬೆಳ್ಳುಂಡಗಿ ಅವರು ವಿದ್ಯಾರ್ಥಿಗಳಿಗೆ ಕೃಷಿ ಮತ್ತು ಪ್ರಾಣಿ ವಿಜ್ಞಾನ (ಈಚಿಡಿm Sಛಿieಟಿಛಿe) ಕ್ಷೇತ್ರದ ಮಹತ್ವವನ್ನು ಮನಮುಟ್ಟುವಂತೆ ವಿವರಿಸಿದರು.

“ಹಿಂದಿನ ದಿನಗಳಲ್ಲಿ ಬಿ.ಎಸ್ಸಿ ಕೃಷಿ ಅಥವಾ ಪಶುವೈದ್ಯಕೀಯ ಶಿಕ್ಷಣದ ಕಡೆಗೆ ಹೆಚ್ಚಿನ ವಿದ್ಯಾರ್ಥಿಗಳು ಗಮನ ಹರಿಸುತ್ತಿರಲಿಲ್ಲ ಹಾಗೂ ಸ್ಪರ್ಧೆಯೂ ಕಡಿಮೆಯಿತ್ತು. ಆದರೆ, ಇಂದಿನ ಬದಲಾದ ಯುಗದಲ್ಲಿ ಈ ’ಫಾರ್ಮ್ ಸೈನ್ಸ್’ ಕ್ಷೇತ್ರವು ಅತ್ಯಂತ ಶರವೇಗದಲ್ಲಿ ಬೆಳೆಯುತ್ತಿದೆ. ವೈಜ್ಞಾನಿಕ ಕೃಷಿ, ಆಹಾರ ಸಂಸ್ಕರಣೆ, ಪಶುಸಂಗೋಪನೆ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿ ಹೊಸ ತಂತ್ರಜ್ಞಾನಗಳು ಬಂದಿರುವುದರಿಂದ ಕೋರ್ಸ್ ಮುಗಿಸಿದ ತಕ್ಷಣ ಹೇರಳ ಉದ್ಯೋಗಾವಕಾಶಗಳು ಲಭ್ಯವಿವೆ. ನಿರಂತರ ಆಸಕ್ತಿ ಮತ್ತು ಶ್ರದ್ಧೆಯಿಂದ ಅಧ್ಯಯನ ನಡೆಸಿದರೆ ಈ ರಂಗದಲ್ಲಿ ಅತ್ಯುನ್ನತ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ,” ಎಂದು ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ರಂಜನ್ ಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ವಿನಯ್ ಕುಮಾರ್ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರೆ, ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕರಾದ ದುಷ್ಯಂತ ಭಾರದ್ವಾಜ್ ಧನ್ಯವಾದ ಸಮರ್ಪಿಸಿದರು.

ಈ ಕಾರ್ಯಾಗಾರದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿ, ತಮ್ಮ ಮುಂದಿನ ಶೈಕ್ಷಣಿಕ ಭವಿಷ್ಯದ ಕೋರ್ಸುಗಳ ಕುರಿತು ಉಪಯುಕ್ತ ಮಾಹಿತಿ ಪಡೆದುಕೊಂಡರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!