spot_img
Wednesday, July 29, 2026
spot_img

ರಿಯಾಕ್ಟ್ ಜೆಎಸ್ ಪ್ರಮಾಣೀಕೃತ ತರಬೇತಿಯಿಂದ ಐಎಂಜೆ ಐಎಸ್‌ಸಿ ವಿದ್ಯಾರ್ಥಿಗಳ ಪ್ಲೇಸ್‌ಮೆಂಟ್ ಸಿದ್ಧತೆ ಬಲ

 

ಮೂಡ್ಲಕಟ್ಟೆ, ಜುಲೈ 25: ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ, ಮೂಡ್ಲಕಟ್ಟೆ ಯ ತರಬೇತಿ ಮತ್ತು ಪ್ಲೇಸ್‌ಮೆಂಟ್ ಸೆಲ್, ಮಂಗಳೂರಿನ ಕೋಡ್‌ಲ್ಯಾಬ್ ಸಿಸ್ಟಮ್ಸ್ ಸಹಯೋಗದೊಂದಿಗೆ ಅಂತಿಮ ವರ್ಷದ ಬಿ.ಸಿ.ಎ ವಿದ್ಯಾರ್ಥಿಗಳಿಗಾಗಿ ಆರು ದಿನಗಳ “ರಿಯಾಕ್ಟ್ ಜೆಎಸ್ ಮೂಲಕ ವೆಬ್ ಅಪ್ಲಿಕೇಶನ್ ಅಭಿವೃದ್ಧಿ” ಪ್ರಮಾಣೀಕೃತ ಪ್ರಾಯೋಗಿಕ ಕಾರ್ಯಾಗಾರವನ್ನು ಜುಲೈ 20 ರಿಂದ ಜುಲೈ 25, 2026 ರವರೆಗೆ ಯಶಸ್ವಿಯಾಗಿ ಆಯೋಜಿಸಿತು.

ಈ ಕಾರ್ಯಾಗಾರವನ್ನು ತರಬೇತಿದಾರರಾದ ಕಾರ್ತಿಕ್, ಸುಜಾದ್ ಶೇಖ್ ಅಲಿ, ಮೊಹಮ್ಮದ್ ಜಝೀಲ್ ಮತ್ತು ಸ್ವಸ್ತಿಕ್ ಅವರು ನಿರ್ವಹಿಸಿದರು. ಕಾರ್ಯಾಗಾರದಲ್ಲಿ ಅವರು ರಿಯಾಕ್ಟ್ ಜೆಎಸ್ ಮತ್ತು ಆಧುನಿಕ ವೆಬ್ ಅಪ್ಲಿಕೇಶನ್ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಆಳವಾದ ಪ್ರಾಯೋಗಿಕ ತರಬೇತಿಯನ್ನು ನೀಡಿದರು.

ಸಂಸ್ಥೆಯ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್ ಅವರ ಮಾರ್ಗದರ್ಶನದಲ್ಲಿ, ಪ್ಲೇಸ್‌ಮೆಂಟ್ ಅಧಿಕಾರಿ ಹಾಗೂ ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಸ್ವರ್ಣ ರಾಣಿ ಯು.ಪಿ. ಯವರ ಬೆಂಬಲದೊಂದಿಗೆ ಈ ಕಾರ್ಯಕ್ರಮವನ್ನು ಸಂಘಟಿಸಲಾಗಿತ್ತು.

ಐಎಂಜೆಐಎಸ್‌ಸಿ ಯಲ್ಲಿ ನಡೆಯುತ್ತಿರುವ ನಿರಂತರ ಪ್ಲೇಸ್‌ಮೆಂಟ್ ಸಿದ್ಧತಾ ಉಪಕ್ರಮದ ಭಾಗವಾಗಿ ತರಬೇತಿ ಮತ್ತು ಪ್ಲೇಸ್‌ಮೆಂಟ್ ಸೆಲ್, ಶೈಕ್ಷಣಿಕ ವರ್ಷದ ಆರಂಭದಿಂದಲೇ ಉದ್ಯಮ-ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಮುಂಬರುವ ಪ್ಲೇಸ್‌ಮೆಂಟ್ ಡ್ರೈವ್‌ಗಳಿಗೆ ಬೇಕಾದ ತಾಂತ್ರಿಕ ಹಾಗೂ ವೃತ್ತಿಪರ ಕೌಶಲ್ಯಗಳನ್ನು ವಿದ್ಯಾರ್ಥಿಗಳಿಗೆ ಒದಗಿಸುವುದೇ ಇದರ ಮುಖ್ಯ ಉದ್ದೇಶವಾಗಿದೆ.

ಕಾರ್ಯಾಗಾರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಎಲ್ಲಾ 46 ವಿದ್ಯಾರ್ಥಿಗಳಿಗೆ ಸಮಾರೋಪ ಸಮಾರಂಭದಲ್ಲಿ ಪ್ರಮಾಣಪತ್ರಗಳನ್ನು ವಿತರಿಸಲಾಯಿತು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!