spot_img
Tuesday, July 28, 2026
spot_img

ಪ್ಲಾಸ್ಮಾ ವಿಜ್ಞಾನದಲ್ಲಿ ಯುವಜನರು ತೊಡಗಿಸಿಕೊಳ್ಳಬೇಕು: ಡಾ. ಎನ್. ರಾಮಸುಬ್ರಮಣ್ಯನ್

 

ಮೂಡುಬಿದಿರೆ: ವಿಜ್ಞಾನವನ್ನು ಘನ, ದ್ರವ ಮತ್ತು ಅನಿಲ ಎಂಬ ಮೂರು ಸ್ಥಿತಿಗಳಿಗೆ ಮಾತ್ರ ಸೀಮಿತಗೊಳಿಸದೆ, ನಾಲ್ಕನೇ ಸ್ಥಿತಿಯಾದ ಪ್ಲಾಸ್ಮಾ ಕುರಿತು ವಿದ್ಯಾರ್ಥಿಗಳು ಆಸಕ್ತಿ ಮತ್ತು ಅರಿವು ಬೆಳೆಸಿಕೊಳ್ಳಬೇಕು ಎಂದು ಗಾಂಧಿನಗರದ ಇನ್‌ಸ್ಟಿಟ್ಯೂಟ್ ಫಾರ್ ಪ್ಲಾಸ್ಮಾ ರಿಸರ್ಚ್ (ಐಪಿಆರ್)ನ ವೈಜ್ಞಾನಿಕ ಅಧಿಕಾರಿ ಹಾಗೂ ಔಟ್‌ರೀಚ್ ವಿಭಾಗದ ಮುಖ್ಯಸ್ಥ ಡಾ. ಎನ್. ರಾಮಸುಬ್ರಮಣ್ಯನ್ ಹೇಳಿದರು.
ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯವು ಭಾರತದ ಅಣುಶಕ್ತಿ ಇಲಾಖೆಯ (ಡಿಎಇ) ಅಧೀನದ ಇನ್‌ಸ್ಟಿಟ್ಯೂಟ್ ಫಾರ್ ಪ್ಲಾಸ್ಮಾ ರಿಸರ್ಚ್ (ಐಪಿಆರ್), ಸಹಯೋಗದಲ್ಲಿ ಎಐಇಟಿ ಎಂಬಿಎ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ 5 ದಿನಗಳ 4ನೇ ರಾಜ್ಯ ಮಟ್ಟದ ಪ್ಲಾಸ್ಮಾ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದು. ಪ್ಲಾಸ್ಮಾ ವಿಜ್ಞಾನದಲ್ಲಿ ಹೆಚ್ಚಿನ ಸಂಶೋಧಕರು ಮತ್ತು ಪರಿಣಿತರ ಅಗತ್ಯವಿದೆ. ವಿದ್ಯಾರ್ಥಿಗಳು ಭೌತಶಾಸ್ತ್ರ, ಗಣಿತ ಹಾಗೂ ಎಂಜಿನಿಯರಿಂಗ್  ವಿಷಯಗಳಲ್ಲಿ ಆಸಕ್ತಿ ಬೆಳೆಸಿ ಸಂಶೋಧನಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರೆ ದೇಶದ ವೈಜ್ಞಾನಿಕ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡಬಹುದು. ಪ್ಲಾಸ್ಮಾ ವಿಜ್ಞಾನ ಮತ್ತು ತಂತ್ರಜ್ಞಾನವು ಎಲೆಕ್ಟ್ರಾನಿಕ್ಸ್, ಸೂಪರ್‌ಕಂಡಕ್ಟಿವಿಟಿ, ಜವಳಿ, ವೈದ್ಯಕೀಯ ಹಾಗೂ ಅಂತರಿಕ್ಷ ತಂತ್ರಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ವ್ಯಾಪಕ ಬಳಕೆಯಲ್ಲಿದೆ. ಮುಂದಿನ ದಿನಗಳಲ್ಲಿ ಸುಸ್ಥಿರ ಮತ್ತು ನಿರಂತರ ಶಕ್ತಿಯ ಮೂಲವನ್ನು ಕಂಡುಹಿಡಿಯುವಲ್ಲಿ ಪ್ಲಾಸ್ಮಾ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸಲಿದೆ. ಪ್ಲಾಸ್ಮಾ ವಿಜ್ಞಾನದ ಕ್ಷೇತ್ರದಲ್ಲಿ ನಡೆಯುತ್ತಿರುವ ಸಂಶೋಧನೆಗಳು ಮಾನವ ಜೀವನವನ್ನು ಇನ್ನಷ್ಟು ಸುರಕ್ಷಿತ, ಸುಸ್ಥಿರ ಮತ್ತು ಸಮೃದ್ಧಗೊಳಿಸುವ ಸಾಮರ್ಥ್ಯ ಹೊಂದಿವೆ. ಆದ್ದರಿಂದ ವಿದ್ಯಾರ್ಥಿಗಳು ಪ್ಲಾಸ್ಮಾ ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಸಿಕೊಂಡು, ನವೋದ್ಯಮ ಮತ್ತು ಸಂಶೋಧನೆಯ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ತಮ್ಮ ಕೊಡುಗೆಯನ್ನು ನೀಡಬೇಕು. ಅಣುಶಕ್ತಿ ಇಲಾಖೆ ಹಾಗೂ ಐಪಿಆರ್ ದೇಶಾದ್ಯಂತ ವಿದ್ಯಾರ್ಥಿಗಳಲ್ಲಿ ಪ್ಲಾಸ್ಮಾ ವಿಜ್ಞಾನದ ಬಗ್ಗೆ ಜಾಗೃತಿ ಮೂಡಿಸಲು ವಿವಿಧ ಔಟ್‌ರೀಚ್ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ.
ಕಾರ‍್ಯಕ್ರಮದಲ್ಲಿ ಇನ್‌ಸ್ಟಿಟ್ಯೂಟ್ ಫಾರ್ ಪ್ಲಾಸ್ಮಾ ರಿಸರ್ಚ್ (ಐಪಿಆರ್)ನ ವೈಜ್ಞಾನಿಕ ಅಧಿಕಾರಿ ಚೇತನ್ ಜರಿವಾಲಾ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ, ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಪ್ರಾರ‍್ಯ ಡಾ ಪೀಟರ್ ಫೆರ್ನಾಂಡೀಸ್ , ಪದವಿಪೂರ್ವ ಕಾಲೇಜಿನ ಪ್ರಾರ‍್ಯ ಮೊಹಮ್ಮದ್ ಸದಾಕತ್, ರ‍್ಯಕ್ರಮ ಸಂಯೋಜಕ ಡಾ ಶಶಿಕುಮಾರ್ ಇದ್ದರು. ಶಾರ್ವರಿ ಶೆಟ್ಟಿ ಕಾರ‍್ಯಕ್ರಮ ನಿರೂಪಿಸಿ, ಸ್ಟೆಲ್ಲಾ ಸಾಜಿ ಸ್ವಾಗತಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!