spot_img
Sunday, September 13, 2026
spot_img

ಗಂಗೊಳ್ಳಿ: ವಿದ್ಯಾರ್ಥಿ ಕ್ಲಬ್‌ಗಳ ಉದ್ಘಾಟನಾ ಕಾರ್ಯಕ್ರಮ

ಗಂಗೊಳ್ಳಿ, ಜು. 28: ಇಲ್ಲಿನ ಎಸ್.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮಂಗಳವಾರ ವಿವಿಧ ವಿದ್ಯಾರ್ಥಿ ಕ್ಲಬ್‌ಗಳ ಉದ್ಘಾಟನಾ ಕಾರ್ಯಕ್ರಮವು ಜರುಗಿತು.
ಕಾರ್ಯಕ್ರಮವನ್ನು ಗಂಗೊಳ್ಳಿಯ ಎಸ್.ವಿ. ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಉಪನ್ಯಾಸಕರಾದ ನರೇಂದ್ರ ಎಸ್. ಗಂಗೊಳ್ಳಿ ಉದ್ಘಾಟಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ಕ್ಲಬ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆ, ನಾಯಕತ್ವದ ಗುಣಗಳು ಹಾಗೂ ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಶಾಲೆಯ ಮುಖ್ಯೋಪಾಧ್ಯಾಯರಾದ ರಾಘವೇಂದ್ರ ಶೇರುಗಾರ್ ಅತಿಥಿಗಳನ್ನು ಸ್ವಾಗತಿಸಿ, ಕ್ಲಬ್‌ಗಳ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿದರು. ವೇದಿಕೆಯಲ್ಲಿ ಶಾಲೆಯ ವಿದ್ಯಾರ್ಥಿ ನಾಯಕ ಆರ್ಯನ್ ವಿ.ಕೆ. ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶ್ರೀಮತಿ ಸುಜಾತಾ ದೇವಾಡಿಗ ಹಾಗೂ ಶ್ರೀಮತಿ ಜಯಶ್ರೀ ನಾಯಕ್ ನಿರೂಪಿಸಿದರು. ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶಾಂತಿ ಡಿ’ಕೋಸ್ಟಾ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!