spot_img
Wednesday, July 29, 2026
spot_img

ಮೂಡ್ಲಕಟ್ಟೆ: ಕೆಎಂಎಫ್ ಉಪ್ಪೂರು ಕೈಗಾರಿಕಾ ಘಟಕಕ್ಕೆ ಭೇಟಿ

 

ಮೂಡ್ಲಕಟ್ಟೆ, ಜುಲೈ 25: ದೀಕ್ಷಾರಂಭ ಕಾರ್ಯಕ್ರಮದ ಅಂಗವಾಗಿ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ, ಮೂಡ್ಲಕಟ್ಟೆಯ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಸಂಘವು ಶುಕ್ರವಾರ ಮೊದಲ ವರ್ಷದ ಬಿ.ಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳಿಗಾಗಿ ಉಪ್ಪೂರಿನ ಕೆಎಂಎಫ್ ಕೈಗಾರಿಕಾ ಘಟಕಕ್ಕೆ ಕೈಗಾರಿಕಾ ಭೇಟಿ ಆಯೋಜಿಸಿತ್ತು.
ಈ ಭೇಟಿಯಲ್ಲಿ ಸುಮಾರು 150 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕೈಗಾರಿಕಾ ಕಾರ್ಯಾಚರಣೆಗಳ ಪ್ರಾಯೋಗಿಕ ಅನುಭವ ನೀಡುವುದು ಹಾಗೂ ಹಾಲು ಉದ್ಯಮದ ಕಾರ್ಯವಿಧಾನಗಳ ಬಗ್ಗೆ ವಿದ್ಯಾರ್ಥಿಗಳಿಗೆ ನೇರ ಪರಿಚಯ ಮಾಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

ಕಾರ್ಯಕ್ರಮದಲ್ಲಿ ಕೆಎಂಎಫ್‌ನ ಮಾರ್ಕೆಟಿಂಗ್ ಮುಖ್ಯಸ್ಥ ಸುಧಾಕರ್ ಅವರು ಮಾತನಾಡಿ, ಕೆಎಂಎಫ್‌ನ ಬೆಳವಣಿಗೆ, ಮಾರ್ಕೆಟಿಂಗ್ ತಂತ್ರಗಳು, ಗುಣಮಟ್ಟದ ಮಾನದಂಡಗಳು ಮತ್ತು ವಿತರಣಾ ಜಾಲದ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಮಾರ್ಗದರ್ಶಕರಾದ ಸತೀಶ್  ವಿದ್ಯಾರ್ಥಿಗಳನ್ನು ಸಂಸ್ಕರಣಾ ಘಟಕಕ್ಕೆ ಕರೆದೊಯ್ದು ಹಾಲಿನ ಸಂಸ್ಕರಣೆ, ಪ್ಯಾಕಿಂಗ್ ಮತ್ತು ಗುಣಮಟ್ಟ ನಿಯಂತ್ರಣದ ವಿವಿಧ ಹಂತಗಳನ್ನು ಪ್ರತ್ಯಕ್ಷವಾಗಿ ತೋರಿಸಿಕೊಟ್ಟರು.
ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ಶಿಲ್ಪಾಶ್ರೀ ಹಾಗೂ ವಿಭಾಗದ ಬೋಧಕವರ್ಗದವರು ಈ ಭೇಟಿಯಲ್ಲಿ ಭಾಗವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!