spot_img
Saturday, August 1, 2026
spot_img

ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ನೂತನ ಅಧ್ಯಕ್ಷರಾಗಿ ಸುಕೇಶ ಶೆಟ್ಟಿ ಹೊಸಮಠ ಆಯ್ಕೆ

ಕುಂದಾಪುರ: ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ೨೦೨೬-೨೮ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಕೊಲ್ಲೂರಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ ಶೆಟ್ಟಿ ಹೊಸಮಠ ಆಯ್ಕೆಯಾಗಿರುತ್ತಾರೆ ಇವರು ಈ ಹಿಂದೆ ಸಂಘದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುತ್ತಾರೆ, ಉಡುಪಿ ಜಿಲ್ಲಾ ನೆಟ್ ಬಾಲ್ ಅಸೋಸಿಯೇಷನ್ ನ (ರಿ) ಉಡುಪಿ ಇದರ ಅಧ್ಯಕ್ಷರು ಹಾಗೂ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಹೊಸಮಠ ಧರ್ಮಗೋಳಿ ಹಳೆಯಮ್ಮ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಇವರು ಹಲ್ತೂರು ಶ್ರೀಧರ ಶೆಟ್ಟಿ ಹಾಗೂ ಹೊಸಮಠ ಶಾಂತ ಎಸ್ ಶೆಟ್ಟಿ ದಂಪತಿಗಳ ಪುತ್ರ.

ಸಂಘದ ನೂತನ ಕಾರ್ಯದರ್ಶಿಯಾಗಿ ದಿನೇಶ ಶೆಟ್ಟಿ ಕಿರಾಡಿ ಶ್ರೀ ದುರ್ಗಾಪರಮೇಶ್ವರೀ ದೇವಳದ ಪದವಿಪೂರ್ವ ಕಾಲೇಜು ಮಂದಾರ್ತಿ ಕೋಶಾಧಿಕಾರಿಯಾಗಿ ಸೌಜನ್ಯ ಹೆಗ್ಡೆ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜು ಗಣಿತ ನಗರ ಕಾರ್ಕಳ ಆಯ್ಕೆಯಾಗಿರುತ್ತಾರೆ ಎಂದು ಸಂಘದ ಮಾಜಿ ಅಧ್ಯಕ್ಷ ಸತೀಶ ಹೆಗ್ಡೆ ಶಾನಾಡಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!