spot_img
Monday, August 3, 2026
spot_img

ಜನತಾ ನ್ಯೂ ಇಂಗ್ಲೀಷ್ ಮಿಡಿಯಂ ಶಾಲೆ: ಚದುರಂಗ ಸ್ಪರ್ಧೆಯಲ್ಲಿ 3 ವಿದ್ಯಾರ್ಥಿಗಳು ಚಿನ್ನದ ಪದಕದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೈಂದೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ರತ್ತು ಬಾಯಿ ಪ್ರೌಢಶಾಲೆ ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ವಲಯ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮಿಡಿಯಂ ಶಾಲೆಯ ದಾಖಲೆಯ 3 ವಿದ್ಯಾರ್ಥಿಗಳು ಬೈಂದೂರು ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

೧೭ರ ವಯೋಮಾನದ ಹುಡುಗಿಯರ ವಿಭಾಗದಲ್ಲಿ ಶಿವಾನಿ (೧೦ನೇ ತರಗತಿ) ಹಾಗೂ ೧೪ರ ವಯೋಮಾನದ ಹುಡುಗರ ವಿಭಾಗದಲ್ಲಿ ತ್ರಿನೀತ್ (೮ನೇ ತರಗತಿ) ಹಾಗೂ ಪ್ರಚೇತ್ (೭ನೇ ತರಗತಿ) ವಲಯ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕಾಗಿ ಪ್ರತಿ ಶನಿವಾರದಂದು ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೂ ವಿವಿಧ ಹವ್ಯಾಸಿ ತರಬೇತಿಗಳನ್ನು ನಡೆಸುವುದರೊಂದಿಗೆ ವಿಶೇಷ ಪ್ರತಿಭಾವಂತರಿಗೆ ಪ್ರತಿನಿತ್ಯವೂ ಶಾಲಾ ಸಮಯದಲ್ಲಿ ಸಂಸ್ಥೆಯ ದೈಹಿಕಶಿಕ್ಷಣ ಶಿಕ್ಷಕರು ಮತ್ತು ಪರಿಣಿತ ತರಬೇತುದಾರದಿಂದ ವಿಶೇಷ ತರಬೇತಿಯನ್ನು ಒದಗಿಸಲಾಗುತ್ತಿದೆ.

ವಿಜೇತ ವಿದ್ಯಾರ್ಥಿಗಳಿಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿ, ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಕರು,ಬೋಧಕ/ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!