spot_img
Tuesday, August 4, 2026
spot_img

ಯಕ್ಷಗಾನ ಕಲಾವಿದ ಕೊಕ್ಕುಡ್ತಿ ಕೃಷ್ಣಮೂರ್ತಿ ನಿಧನ

ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪ ಹಿರಿಯ ಕಲಾವಿದರಾದ ಕೊಕ್ಕುಡ್ತಿ ಕೃಷ್ಣಮೂರ್ತಿ (75) ಆಗಸ್ಟ್ 2 ರಂದು ನಿಧನರಾದರು.

ಅವರು ನಾಲ್ಕು ಗಂಡು ಮಕ್ಕಳು, ಅಪಾರ ಬಂದು ಬಾಂಧವರನ್ನು ಅಗಲಿದ್ದಾರೆ.

ಕೊಕ್ಕುಡ್ತಿ ಕೃಷ್ಣಮೂರ್ತಿ ನಾಡಿನ ಪ್ರಸಿದ್ಧ ಬಯಲಾಟ ಮೇಳಗಳಾದ ಶ್ರೀ ಕ್ಷೇತ್ರ ಮಂದಾರ್ತಿ, ಮಾರಣಕಟ್ಟೆ, ಶಿವರಾಜ ಪುರ , ಶ್ರೀ ಕ್ಷೇತ್ರ ಸೋಮವಾರ ಸಂತೆ , ಗೋಳಿಗರಡಿಮೇಳ ಸೇರಿದಂತೆ ಅನೇಕ ಮೇಳಗಳಲ್ಲಿ‌ ಸುಮಾರು 50 ವರ್ಷಕ್ಕೂ ಹೆಚ್ಚು ಕಾಲ ಯಕ್ಷಗಾನ ಸೇವೆಗೈದಿದ್ದರು. ಎಲ್ಲಾ ರೀತಿಯ ಪೌರಾಣಿಕ ಪುರುಷ ಪಾತ್ರಗಳನ್ನು ಮನೋಜ್ಞವಾಗಿ ನಿರ್ವಹಿಸಿ ಕಲಾರಸಿಕರ ಪ್ರೀತ್ಯಾದರಕ್ಕೆ ಪಾತ್ರರಾಗಿದ್ದರು. ಯಕ್ಷಗಾನ ಕ್ಷೇತ್ರದ ಸೇವೆಯನ್ನು ಗಮನಿಸಿ ಇವರಿಗೆ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿತ್ತು. ಉಡುಪಿಯ ’ಯಕ್ಷಗಾನ ಕಲಾರಂಗ ಪ್ರಶಸ್ತಿ’ಯು ಸೇರಿದಂತೆ ಅನೇಕ ಪ್ರಶಸ್ತಿ ಹಾಗೂ ಸನ್ಮಾನಕ್ಕೆ ಪಾತ್ರರಾಗಿದ್ದರು.

ಅವರ ನಿಧನಕ್ಕೆ ಸಂಸ್ಥೆ ಅಧ್ಯಕ್ಷ ಎಂ. ಗಂಗಾಧರ ರಾವ್ ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!