spot_img
Monday, August 3, 2026
spot_img

ಅಟಲ್ ಪಿಂಚಣಿ ಯೋಜನೆಯಡಿ ಶಿವಮೊಗ್ಗದಲ್ಲಿ 1.58 ಲಕ್ಷಕ್ಕೂ ಅಧಿಕ ನೋಂದಣಿ; ಅಸಂಘಟಿತ ವಲಯದ ಕಾರ್ಮಿಕರಿಗೆ ಆರ್ಥಿಕ ಭದ್ರತೆಯತ್ತ ಕೇಂದ್ರ ಸರ್ಕಾರದ ಮಹತ್ವದ ಹೆಜ್ಜೆ: ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ: ಅಸಂಘಟಿತ ವಲಯದಲ್ಲಿ ದುಡಿಯುವ ಲಕ್ಷಾಂತರ ಕಾರ್ಮಿಕರಿಗೂ ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆ ಹಾಗೂ ಗೌರವಯುತ ಜೀವನವನ್ನು ಖಾತ್ರಿಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಟಲ್ ಪಿಂಚಣಿ ಯೋಜನೆ  (APY)  ದೇಶಾದ್ಯಂತ ವ್ಯಾಪಕವಾಗಿ ವಿಸ್ತರಿಸುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿಯೂ ಗಮನಾರ್ಹ ಸ್ಪಂದನೆ ದೊರೆತಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

ಅಟಲ್ ಪಿಂಚಣಿ ಯೋಜನೆಯ ಅನುಷ್ಠಾನ, ಫಲಾನುಭವಿಗಳ ಸಂಖ್ಯೆ, ಮಹಿಳೆಯರ ಭಾಗವಹಿಸುವಿಕೆ, ಯೋಜನೆಯ ಆರ್ಥಿಕ ಬಲ ಹಾಗೂ ಕರ್ನಾಟಕ ಮತ್ತು ಜಿಲ್ಲಾವಾರು ಮಾಹಿತಿಯನ್ನು ಕೋರಿ ಸಂಸತ್ತಿನಲ್ಲಿ ಬಿ.ವೈ. ರಾಘವೇಂದ್ರ ಅವರು ಕೇಳಿದ ಪ್ರಶ್ನೆಗೆ ಕೇಂದ್ರ ಸರ್ಕಾರ ನೀಡಿರುವ ಉತ್ತರವು ಯೋಜನೆಯ ವ್ಯಾಪಕ ವಿಸ್ತರಣೆಯನ್ನು ಅಂಕಿಅಂಶಗಳ ಮೂಲಕ ತೋರಿಸಿದೆ.

ಕೇಂದ್ರ ಸರ್ಕಾರದ ಉತ್ತರದ ಪ್ರಕಾರ, 2026ರ ಜೂನ್ 30ರ ವೇಳೆಗೆ ದೇಶಾದ್ಯಂತ 9,29,47,723 ಮಂದಿ ಅಟಲ್ ಪಿಂಚಣಿ ಯೋಜನೆಗೆ ಸೇರ್ಪಡೆಯಾಗಿದ್ದು, ಅವರಲ್ಲಿ 4,56,98,133 ಮಹಿಳೆಯರು ಸೇರಿದ್ದಾರೆ. ಯೋಜನೆಯಡಿ ಸುಮಾರು ರೂ.57,296 ಕೋಟಿಯಷ್ಟು ನಿಧಿಯನ್ನು ನಿರ್ವಹಿಸಲಾಗುತ್ತಿದ್ದು, ಇದು ಯೋಜನೆಯ ಮೇಲಿನ ಜನರ ವಿಶ್ವಾಸ ಹಾಗೂ ಅದರ ವಿಸ್ತಾರವನ್ನು ಪ್ರತಿಬಿಂಬಿಸುತ್ತದೆ.

ಕರ್ನಾಟಕದಲ್ಲಿ 52,72,744 ಮಂದಿ ಈ ಯೋಜನೆಗೆ ನೋಂದಾಯಿಸಿಕೊಂಡಿದ್ದು, ಅವರಲ್ಲಿ 25,10,470 ಮಹಿಳೆಯರು ಇದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ 1,58,401 ಮಂದಿ ಅಟಲ್ ಪಿಂಚಣಿ ಯೋಜನೆಯಡಿ ಸೇರ್ಪಡೆಯಾಗಿದ್ದು, ಅವರಲ್ಲಿ 79,584 ಮಹಿಳೆಯರು ಇದ್ದಾರೆ. ಇದು ಜಿಲ್ಲೆಯಲ್ಲಿಯೂ ಯೋಜನೆಗೆ ಗಣನೀಯ ಪ್ರಮಾಣದ ನೋಂದಣಿಯಾಗಿರುವುದನ್ನು ತೋರಿಸುತ್ತದೆ.

ಈ ಕುರಿತು ಪ್ರತಿಕ್ರಿಯಿಸಿದ ಶ್ರೀ ಬಿ.ವೈ. ರಾಘವೇಂದ್ರ, “ರೈತರು, ಕೂಲಿ ಕಾರ್ಮಿಕರು, ಸಣ್ಣ ವ್ಯಾಪಾರಿಗಳು, ಸ್ವಯಂ ಉದ್ಯೋಗಿಗಳು ಸೇರಿದಂತೆ ಅಸಂಘಟಿತ ವಲಯದಲ್ಲಿ ದುಡಿಯುವ ಲಕ್ಷಾಂತರ ಜನರಿಗೆ ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆ ಹಾಗೂ ಖಚಿತ ಪಿಂಚಣಿಯ ಸೌಲಭ್ಯವನ್ನು ತಲುಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಅಟಲ್ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ. ದುಡಿಯುವ ಅವಧಿಯಲ್ಲಿ ನಿಯಮಿತ ಉಳಿತಾಯವನ್ನು ಪೆÇ್ರೀತ್ಸಾಹಿಸುವ ಮೂಲಕ 60 ವರ್ಷಗಳ ನಂತರ ಖಚಿತ ಆದಾಯದ ಭರವಸೆ ನೀಡುವ ಈ ಯೋಜನೆ, ಸಾಮಾನ್ಯ ಕುಟುಂಬಗಳ ಭವಿಷ್ಯವನ್ನು ಆರ್ಥಿಕವಾಗಿ ಮತ್ತಷ್ಟು ಭದ್ರಗೊಳಿಸುವ ಮಹತ್ವದ ಹೆಜ್ಜೆಯಾಗಿದೆ. ಕಳೆದ ಒಂದು ದಶಕದಲ್ಲಿ ಯೋಜನೆಗೆ ನಿರಂತರವಾಗಿ ಹೆಚ್ಚುತ್ತಿರುವ ನೋಂದಣಿ, ಯೋಜನೆಯ ಮೇಲಿನ ಜನರ ವಿಶ್ವಾಸ ಹಾಗೂ ಅದರ ವ್ಯಾಪಕ ಸ್ವೀಕಾರವನ್ನು ಪ್ರತಿಬಿಂಬಿಸುತ್ತದೆ,” ಎಂದು ಹೇಳಿದರು.

ಅಟಲ್ ಪಿಂಚಣಿ ಯೋಜನೆಯ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ, ಅರ್ಹ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಯೋಜನೆಗೆ ನೋಂದಾಯಿಸಿಕೊಳ್ಳುವ ಮೂಲಕ ತಮ್ಮ ಹಾಗೂ ತಮ್ಮ ಕುಟುಂಬದ ಭವಿಷ್ಯವನ್ನು ಆರ್ಥಿಕವಾಗಿ ಭದ್ರಪಡಿಸಿಕೊಳ್ಳುವಂತೆ ಬಿ .ವೈ. ರಾಘವೇಂದ್ರ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!