spot_img
Monday, August 3, 2026
spot_img

ಗುಜ್ಜಾಡಿ ಲೈಟ್‌ಹೌಸ್ ಪ್ರದೇಶದಲ್ಲಿ ಕಡಲ ಕೊರೆತ: ಸ್ಥಳಕ್ಕೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಗುಜ್ಜಾಡಿ ಗ್ರಾಮದ ಲೈಟ್‌ಹೌಸ್ ಪ್ರದೇಶದಲ್ಲಿ ಉಂಟಾಗಿರುವ ಕಡಲ ಕೊರೆತದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಕಡಲ ಕೊರೆತದಿಂದ ಉಂಟಾಗಿರುವ ಸಮಸ್ಯೆಗಳ ಕುರಿತು ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಸಾರ್ವಜನಿಕರ ಸುರಕ್ಷತೆಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ತಕ್ಷಣವೇ ಅಗತ್ಯ ಮುನ್ನೆಚ್ಚರಿಕೆ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕರಾವಳಿ ಸಂರಕ್ಷಣೆಗೆ ಆದ್ಯತೆ ನೀಡುವ ಮೂಲಕ ಶಾಶ್ವತ ಪರಿಹಾರ ಕಲ್ಪಿಸಲು ಅಗತ್ಯ ಕ್ರಮಗಳನ್ನು ಶೀಘ್ರವಾಗಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಶಾಸಕರು, ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರದ ಮಟ್ಟದಲ್ಲಿಯೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!