spot_img
Monday, August 3, 2026
spot_img

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯಲ್ಲಿ ಅಗರಬತ್ತಿ ತಯಾರಿಕಾ ತರಬೇತಿ ಉದ್ಘಾಟನೆ

ಬ್ರಹ್ಮಾವರ: ಗ್ರಾಮೀಣಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ ಸಂಸ್ಥೆ (ರುಡ್‌ಸೆಟ್), ಬ್ರಹ್ಮಾವರ ವತಿಯಿಂದ ಅಗರಬತ್ತಿ ತಯಾರಿಕಾ ತರಬೇತಿ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬ್ರಹ್ಮಾವರ ಬೋರ್ಡ್ ಹೈಸ್ಕೂಲ್‌ನ ಹಿರಿಯ ಅಧ್ಯಾಪಕರಾದ ಶಾಮಿಲಿ ಅಜಯ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ, “ಸಣ್ಣ ಮಟ್ಟದ ಉದ್ಯಮವೆಂದು ಯಾವುದೇ ಉದ್ಯಮವನ್ನು ಕೀಳಾಗಿ ಕಾಣಬಾರದು. ಮಿತ ಬಂಡವಾಳದಿಂದಲೂ ಉತ್ತಮ ಉದ್ಯಮವನ್ನು ಆರಂಭಿಸಿ ಯಶಸ್ಸು ಸಾಧಿಸಬಹುದು. ಆದ್ದರಿಂದ ಯಾವುದೇ ಕೌಶಲ್ಯದ ಬಗ್ಗೆ ಕೀಳರಿಮೆ ಹೊಂದಬಾರದು. ಮಿತ ಬಂಡವಾಳದಿಂದಲೂ ಯಶಸ್ವಿ ಉದ್ಯಮ ಆರಂಭಿಸಬಹುದು. ಇಂದಿನ ಸಮಾಜದಲ್ಲಿ ಕೇವಲ ಪದವಿಗಳಿಗಿಂತ ಕೌಶಲ್ಯಾಧಾರಿತ ಉದ್ಯಮಗಳಿಗೆ ಹೆಚ್ಚಿನ ಆದ್ಯತೆ ದೊರೆಯುತ್ತಿದೆ. ಮಹಿಳಾ ಸಬಲೀಕರಣದತ್ತ ನೀವು ಮಹತ್ವದ ಹೆಜ್ಜೆ ಇಟ್ಟಿದ್ದು, ಈ ತರಬೇತಿಯನ್ನು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು,” ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಡಾ. ಬೊಮ್ಮಯ್ಯ ಎಂ. ಮಾತನಾಡಿ, “ಹೊಸತನದತ್ತ ನಿಮ್ಮ ಆಸಕ್ತಿ ಮತ್ತು ಕಲಿಕೆಯ ಮನೋಭಾವ ಅಭಿವೃದ್ಧಿಯ ಸಂಕೇತವಾಗಿದೆ. ಪ್ರತಿಯೊಬ್ಬರಲ್ಲೂ ಒಂದಲ್ಲೊಂದು ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಸೂಕ್ತ ತರಬೇತಿ ಪಡೆದು ಉದ್ಯಮ ಆರಂಭಿಸಿದರೆ ಸ್ವಾವಲಂಬಿ ಜೀವನವನ್ನು ರೂಪಿಸಿಕೊಳ್ಳಬಹುದು,” ಎಂದು ತಿಳಿಸಿದರು. ಅವರು ತರಬೇತಿಯಲ್ಲಿ ಭಾಗವಹಿಸಿರುವ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ರವಿ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಉಪನ್ಯಾಸಕಿ ಚೈತ್ರ ಕೆ. ನಿರೂಪಿಸಿ ಸ್ವಾಗತಿಸಿದರು. ಹಿರಿಯ ಉಪನ್ಯಾಸಕ ಸಂತೋಷ್ ಶೆಟ್ಟಿ ವಂದಿಸಿದರು.

 

 

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!