spot_img
Tuesday, August 4, 2026
spot_img

ಯಕ್ಷಗಾನ ಗುರು ಕೃಷ್ಣಸ್ವಾಮಿ ಜೋಯಿಸ್ ನಿಧನ

ಬ್ರಹ್ಮಾವರ : ಚಾಂತಾರು ನಿವಾಸಿ, ಬಡಗುತಿಟ್ಟಿನ ಹಿರಿಯ ಮದ್ದಲೆ ವಾದಕರು, ಯಕ್ಷಗಾನ ಗುರುಗಳೂ ಆದ ಕೃಷ್ಣಸ್ವಾಮಿ ಜೋಯಿಸ್ (75) ಇಂದು (04.08.2026)  ಮುಂಜಾನೆ ಅಲ್ಪಕಾಲದ ಅಸೌಖ್ಯದಿಂದ ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಹಂಗಾರಕಟ್ಟೆ ಯಕ್ಷಗಾನ ಕೇಂದ್ರದ ಮೊದಲ ತಂಡದ ವಿದ್ಯಾರ್ಥಿಯಾಗಿದ್ದ ಇವರು,ಭಾಗವತ ನಾರ್ಣಪ್ಪ ಉಪ್ಪೂರ ಮತ್ತು ಬೇಳಂಜೆ ತಿಮ್ಮಪ್ಪ ನಾಯಕರ ಶಿಷ್ಯರಾಗಿ,ಭಾಗವತಿಕೆ ಮತ್ತು ಮದ್ದಲೆ ವಾದನದಲ್ಲಿ ವಿಶೇಷ ಪರಿಣತಿಯನ್ನು ಹೊಂದಿದ್ದರು. ಎಚ್. ಸುಬ್ಬಣ್ಣ ಭಟ್ಟರ ಮಾರ್ಗದರ್ಶನದಲ್ಲಿ ಪ್ರಸಾಧನ ತಜ್ಞರಾಗಿಯೂ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ. ಅಜಪುರ ಯಕ್ಷಗಾನ ಮಂಡಳಿಯ ಗೌರವಾಧ್ಯಕ್ಷರಾಗಿದ್ದ ಇವರು ಮಣ್ಣಿನ ಗಣಪತಿ ಮೂರ್ತಿಯ ನಿರ್ಮಾಣದಲ್ಲಿಯೂ ಪ್ರವೀಣರಾಗಿದ್ದರು. ಸಾಲಿಗ್ರಾಮ ಮಕ್ಕಳ ಮೇಳದಲ್ಲಿ ದೀರ್ಘಕಾಲ ಮದ್ದಲೆವಾದಕರಾಗಿ ಸೇವೆಗೈದಿದ್ದ ಇವರು ದೇಶ, ವಿದೇಶಗಳ ಪ್ರದರ್ಶನಗಳಲ್ಲಿ ಹಿಮ್ಮೇಳ ವಾದಕರಾಗಿ, ಪ್ರಸಾಧನ ಕಲಾವಿದರಾಗಿ ಭಾಗವಹಿಸಿದ್ದರು. ಯಕ್ಷಗಾನದ ಹಿಮ್ಮೇಳ ಹಾಗೂ ಮುಮ್ಮೇಳ ಎರಡರ ಪಾರಂಪರಿಕ ಸೂಕ್ಷ್ಮತೆಗಳನ್ನು ಬಲ್ಲ ಜೋಯಿಸರು ನೂರಾರು ಶಿಷ್ಯರನ್ನು ರೂಪಿಸಿದ್ದಾರೆ. ಯಕ್ಷಶಿಕ್ಷಣ ಟ್ರಸ್ಟ್ ನಲ್ಲೂ ಹಲವಾರು ವರ್ಷ ಗುರುಗಳಾಗಿ ಸೇವೆಸಲ್ಲಿಸಿದ ಇವರಿಗೆ ಸಂಸ್ಥೆ  ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ನೀಡಿ ಗೌರವಿಸಿದೆ.
ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧುಬಳಗ ಹಾಗೂ ಶಿಷ್ಯವೃಂದವನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ಸೂಚಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!