spot_img
Tuesday, August 4, 2026
spot_img

ಜನಪ್ರತಿನಿಧಿ ಪ್ರಕಾಶನ ಪ್ರಕಟಿಸಿರುವ ಲೇಖಕ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಬರೆದಿರುವ ‘ಸಹಕಾರ ರಂಗದ ತ್ಯಾಗಮಯಿ ಮೊಳಹಳ್ಳಿ’ ಪುಸ್ತಕ ಬಿಡುಗಡೆ

ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ರಂಗಕ್ಕೆ ಭದ್ರಬುನಾದಿ ಹಾಕಿದ ಕೀರ್ತಿಶೇಷ ಮೊಳಹಳ್ಳಿ ಶಿವರಾವ್ ಅವರ ಜೀವನಾದರ್ಶ, ತ್ಯಾಗ, ಸಂಘಟನಾ ಶಕ್ತಿ ಸಮಾಜಕ್ಕೆ ಸದಾ ಪ್ರೇರಣೆ. ಕರಾವಳಿಯಲ್ಲಿ ಮೊಳಹಳ್ಳಿ ಶಿವರಾವ್ ಅವರು ಬಿತ್ತಿದ ಸಹಕಾರ ಬೀಜ ಇಂದು ಬೃಹತ್ ವೃಕ್ಷವಾಗಿ ಬೆಳೆದು ಸಾವಿರಾರು ಕುಟುಂಬಗಳ ಬದುಕಿಗೆ ಆಶ್ರಯವಾಗಿದೆ. ಇಂತಹ ಮಹಾನ್ ವ್ಯಕ್ತಿತ್ವದ ಸಾಧನೆ ಮತ್ತು ಸಹಕಾರಿ ಕ್ಷೇತ್ರಕ್ಕೆ ಅವರು ನೀಡಿದ ಅಮೂಲ್ಯ ಕೊಡುಗೆಗಳನ್ನು ಸಮಗ್ರವಾಗಿ ದಾಖಲಿಸಿರುವ ‘ತ್ಯಾಗಮಯಿ ಮೊಳಹಳ್ಳಿ’ ಗ್ರಂಥ ಯುವಪೀಳಿಗೆಗೆ ಸ್ಫೂರ್ತಿ ನೀಡುವ ಮೌಲಿಕ ಕೃತಿಯಾಗಿದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.

ಕುಂದಾಪುರದ ಜನಪ್ರತಿನಿಧಿ ಪ್ರಕಾಶನ ಪ್ರಕಟಿಸಿರುವ ಅಂಕಣಕಾರ, ಕ್ರೀಡಾ ಲೇಖಕ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಬರೆದ ‘ತ್ಯಾಗಮಯಿ ಮೊಳಹಳ್ಳಿ’ ಕೃತಿಯನ್ನು ಸೋಮವಾರ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು.

ನಮ್ಮ ಬ್ಯಾಂಕಿನ ಪ್ರಧಾನ ಕಚೇರಿಯ ಕಿರಿಯ ನಿರೀಕ್ಷಕರು ಹಾಗೂ ಪತ್ರಿಕೋದ್ಯಮದಲ್ಲಿ ಕ್ರೀಡಾ ಬರಹಗಾರರಾಗಿ ಸುಮಾರು ೩೫ ವರ್ಷಗಳಿಂದ ಗುರುತಿಸಿಕೊಂಡಿರುವ ಜಗದೀಶ್ಚಂದ್ರ ಅಂಚನ್ ಅವರು ‘ತ್ಯಾಗಮಯಿ ಮೊಳಹಳ್ಳಿ’ ಕೃತಿಯ ಲೇಖಕರಾಗಿದ್ದಾರೆ.

ಈ ಸಂದರ್ಭದಲ್ಲಿ ನಬಾರ್ಡ್ ಸಿಜಿ‌ಎಂ ಸಂಗೀತಾ ಕರ್ತ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಿರ್ದೇಶಕ ಅಶೋಕ್ ಕುಮಾರ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಮಹಾಪ್ರಬಂಧಕ ಸುನೀಲ್ ಕುಮಾರ್ ಹೊಳ್ಳ, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕ ರಮೇಶ್ ಎಚ್.ಎನ್., ಸಹಾಯಕ ನಿಬಂಧಕ ಸುಧೀರ್ ಕುಮಾರ್, ಕೃತಿಕಾರ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಉಪಸ್ಥಿತರಿದ್ದರು.

ಜನಪ್ರತಿನಿಧಿ ಪ್ರಕಾಶನದ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.

ಹಿರಿಯ ಕ್ರೀಡಾ ಲೇಖಕರಲ್ಲಿ ಒಬ್ಬಾಗಿರುವ ಎಸ್. ಜಗದೀಶ್ಚಂದ್ರ ಅಂಚನ್, ಸೂಟರ್‌ಪೇಟೆ ಅವರು ಸುಮಾರು ೩೬ ವರ್ಷಗಳ ನಿರಂತರ ಪತ್ರಿಕೋದ್ಯಮದ ಅವಧಿಯಲ್ಲಿ ಅವರು ೪,೫೦೦ಕ್ಕೂ ಹೆಚ್ಚು ಕ್ರೀಡಾ ಲೇಖನಗಳನ್ನು ಬರೆದಿದ್ದಾರೆ. ಎಸ್‌ಸಿಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯ ಕಿರಿಯ ನಿರೀಕ್ಷಕರು ಆಗಿರುವ ಇವರು ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದ ಇನ್ನೂರಕ್ಕೂ ಹೆಚ್ಚು ಲೇಖನಗಳನ್ನು ಬರೆದಿದ್ದಾರೆ. ಮಾತ್ರವಲ್ಲ ಇವರು ನಾಟಕ, ಸಿನಿಮಾ ಮತ್ತು ಯಕ್ಷಗಾನದ ಕುರಿತು ವಿಮರ್ಶಾತ್ಮಕ ಲೇಖನಗಳ ಮೂಲಕ ತಮ್ಮ ಬಹುಮುಖ ಪ್ರತಿಭೆಯನ್ನು ಸಹ ಅನಾವರಣಗೊಳಿಸಿದ್ದಾರೆ. ಸಹಕಾರ ರಂಗದ ಪಿತಾಮಹ ಮೊಳಹಳ್ಳಿ ಶಿವರಾಯರ ಜೀವನ, ತತ್ವಗಳು ಮತ್ತು ಸಮಾಜಸೇವೆಯ ಬಗ್ಗೆ ಅವರಿಗೆ ವಿಶೇಷ ಗೌರವ ಹಾಗೂ ಅಭಿಮಾನವಿದೆ. ಕಳೆದ ಹತ್ತು ವರ್ಷಗಳ ಪ್ರತಿ ವರ್ಷ ಆಗಸ್ಟ್ ೪ ರಂದು ಶಿವರಾಯರ ಜನ್ಮದಿನದಂದು ವಿವಿಧ ಪತ್ರಿಕೆಗಳಲ್ಲಿ ಸ್ಮರಣಾರ್ಥ ಲೇಖನಗಳನ್ನು ಬರೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!