spot_img
Tuesday, August 4, 2026
spot_img

ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ಕರಾಟೆ ಪಂದ್ಯಾಟ ಸಂಪನ್ನ

ಬಸ್ರೂರು: “ಕರಾಟೆ ಕೇವಲ ಸ್ಪರ್ಧೆಯಲ್ಲ, ಅದು ಬದುಕಿನ ಶಿಸ್ತು. ಆತ್ಮರಕ್ಷಣೆ, ಆತ್ಮವಿಶ್ವಾಸ, ಧೈರ್ಯ, ಸಮಯಪ್ರಜ್ಞೆ ಹಾಗೂ ಉತ್ತಮ ವ್ಯಕ್ತಿತ್ವವನ್ನು ರೂಪಿಸುವ ಶ್ರೇಷ್ಠ ಕಲೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಶಿಕ್ಷಣದ ಜೊತೆಗೆ ಕ್ರೀಡೆಯಲ್ಲೂ ತೊಡಗಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು. ಇಂದಿನ ಶಿಸ್ತುಬದ್ಧ ವಿದ್ಯಾರ್ಥಿಗಳೇ ನಾಳೆಯ ಸುರಕ್ಷಿತ ಮತ್ತು ಸದೃಢ ಭಾರತದ ನಿರ್ಮಾಪಕರು” ಎಂದು ಕುಂದಾಪುರ ಗ್ರಾಮಾಂತರ ಠಾಣೆ ಕಂಡ್ಲೂರು ಇಲ್ಲಿನ ಪಿ‌ಎಸ್‌ಐ ನಿರಂಜನ್ ಗೌಡ ಹೇಳಿದರು.

ಅವರು ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕುಂದಾಪುರ ಇವರ ಆಶ್ರಯದಲ್ಲಿ ನಡೆದ ೨೦೨೬-೨೭ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ವಲಯ ಮಟ್ಟದ ಕರಾಟೆ ಪಂದ್ಯಾಟ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲೆಯ ಅಧ್ಯಕ್ಷ ಸಂತೋಷ್ ಶೆಟ್ಟಿ ಮಾತನಾಡಿ, “ಶಿಕ್ಷಣವು ಅಂಕಗಳಿಗಷ್ಟೇ ಸೀಮಿತವಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ, ಮೌಲ್ಯಗಳು, ಶಿಸ್ತು ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಪ್ರಕ್ರಿಯೆಯಾಗಿದೆ. ಶಿಕ್ಷಕರ ಮಾರ್ಗದರ್ಶನ, ಪೋಷಕರ ಪ್ರೋತ್ಸಾಹ ಮತ್ತು ವಿದ್ಯಾರ್ಥಿಗಳ ಪರಿಶ್ರಮ ಒಂದಾದಾಗ ಸಾಧನೆಯ ಶಿಖರ ತಲುಪಬಹುದು” ಎಂದು ಹೇಳಿದರು.

ಕಾರ್ಯಕ್ರಮದಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಎಸ್. ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಸತ್ಯನಾರಾಯಣ ಜಿ., ಕುಸುಮಾಕರ ಶೆಟ್ಟಿ, ಕಿಶನ್ ರಾಜ್ ಶೆಟ್ಟಿ, ಉದಯ ಮಡಿವಾಳ, ಬಾಲಕೃಷ್ಣ ಶೆಟ್ಟಿ, ನಾರಾಯಣ ಮರಾಠೆ, ಬಿ.ಆರ್.ಪಿ ಸಂತೋಷ್ ಶೆಟ್ಟಿ, ಸಿ.ಆರ್.ಪಿ ಸುಮನಾ, ದಿನಕರ ಶೆಟ್ಟಿ, ಪ್ರೇಮಾ, ರೋಹಿತಾಶ್ವ ಉದ್ಯಾವರ, ಕೀರ್ತಿ ಜಿ.ಕೆ., ಶಿಹಾನ್ ಸಂದೀಪ್ ವಿ. ಕಿರಣ್ ಹಾಗೂ ಶಾಲೆಯ ಉಪಪ್ರಾಂಶುಪಾಲ ಸಂದೀಪ್ ಉಪಸ್ಥಿತರಿದ್ದರು.

ಪಂದ್ಯಾಟದ ವಿವಿಧ ವಿಭಾಗಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪದಕ, ಪ್ರಶಸ್ತಿಪತ್ರಗಳನ್ನು ವಿತರಿಸಿ ಗೌರವಿಸಲಾಯಿತು. ಗಣ್ಯರು ವಿಜೇತರಿಗೆ ಅಭಿನಂದನೆ ಸಲ್ಲಿಸಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವಂತೆ ಶುಭ ಹಾರೈಸಿದರು.

ಸಹ ಶಿಕ್ಷಕಿ ಗಗನ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಉಪಪ್ರಾಂಶುಪಾಲ ಸಂದೀಪ್ ಸ್ವಾಗತಿಸಿದರು. ಸಹ ಶಿಕ್ಷಕಿ ಪ್ರಿಯಾ ಅವರು ಬಹುಮಾನ ವಿಜೇತರ ಪಟ್ಟಿ ವಾಚಿಸಿದರು.

ಕುಂದಾಪುರ ವಲಯದ ವಿವಿಧ ಶಾಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಉತ್ಸಾಹದಿಂದ ಸ್ಪರ್ಧಿಸಿ ತಮ್ಮ ಕರಾಟೆ ಕೌಶಲ್ಯ, ಆತ್ಮಸ್ಥೈರ್ಯ, ಏಕಾಗ್ರತೆ ಹಾಗೂ ಕ್ರೀಡಾಸ್ಫೂರ್ತಿಯನ್ನು ಪ್ರದರ್ಶಿಸಿದರು. ಕರಾಟೆಯ ಪಂಚ್‌ನಲ್ಲಿ ವ್ಯಕ್ತವಾದ ಶಕ್ತಿ, ಹೆಜ್ಜೆಯಲ್ಲಿ ಮೂಡಿದ ಶಿಸ್ತು ಹಾಗೂ ವಿದ್ಯಾರ್ಥಿಗಳ ಸಾಧನೆಯಲ್ಲಿ ಪ್ರತಿಫಲಿಸಿದ ಭಾರತದ ಉಜ್ವಲ ಭವಿಷ್ಯದ ಚಿತ್ರಣ ಸಮಾರಂಭದ ಪ್ರಮುಖ ಆಕರ್ಷಣೆಯಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!