spot_img
Wednesday, August 5, 2026
spot_img

ನೇತಾಜಿ ಹಿರಿಯ ಪ್ರಾಥಮಿಕ ಶಾಲೆ ಕಂಡ್ಲೂರು: ನಿವೃತ್ತರಾದ ಮುಖ್ಯ ಶಿಕ್ಷಕ ಎ.ಜಯಕರ ಶೆಟ್ಟಿ ಅವರಿಗೆ ಬೀಳ್ಕೊಡುಗೆ | ಹಾರ ತುರಾಯಿ ಸ್ವೀಕರಿಸದೆ ಮಾದರಿಯಾದ ಶಿಕ್ಷಕ

ಕುಂದಾಪುರ: ಕಂಡ್ಲೂರು ನೇತಾಜಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿ ಜು.31-2026ನೇ ಶುಕ್ರವಾರ ವಯೋ ನಿವೃತ್ತಿ ಹೊಂದಿದ ಎ ಜಯಕರ ಶೆಟ್ಟಿ (ದೈಹಿಕ ಶಿಕ್ಷಣ ಶಿಕ್ಷಕರು) ಇವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಶುಕ್ರವಾರ ನಡೆಯಿತು.

ವಿದ್ಯಾರ್ಥಿಸ್ನೇಹಿಯಾಗಿ ಸಾರ್ಥಕ ಸೇವೆ ಸಲ್ಲಿಸಿದ ಎ.ಜಯಕರ ಶೆಟ್ಟಿಯವರ ಬೀಳ್ಕೊಡುಗೆ ಕಾರ್ಯಕ್ರಮ ಕೂಡಾ ಸರಳ ಹಾಗೂ ಅರ್ಥಪೂರ್ಣವಾಗಿ ನೆರವೇರಿತು. ಹಾರ ತರಾಯಿ ಸ್ವೀಕರಿಸದೆ ನನ್ನ ವಿದ್ಯಾರ್ಥಿಗಳಿಗೆ ಹಾಗೂ ನನ್ನ ಶಾಲೆಗೆ ಉಪಯುಕ್ತವಾಗುವಂತಹ ವಸ್ತುಗಳನ್ನು ನೀಡಿ ಎಂದು ಅವರು ಮೊದಲೇ ಆಡಳಿತ ಮಂಡಳಿ, ಪೋಷಕರು, ಹಳೆ ವಿದ್ಯಾರ್ಥಿಗಳು ಹಾಗೂ ಬಂಧು-ಮಿತ್ರರಿಗೆ ವಿನಂತಿಸಿದ್ದರು. ಅದರಂತೆ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರಿಂದ ಒಂದು ಅಗ್ನಿ ನಂಧಕ ಂಃಅ, ಹಾಗೂ ಪೋಷಕರಿಂದ ಅಗ್ನಿ ನಂಧಕ ಅ‌ಔ೨ , ಹಳೆ ವಿದ್ಯಾರ್ಥಿಗಳು ಶಾಲೆಗೆ ಬೇಕಾಗುವ ಕಲಿಕಾ ಸಾಮಗ್ರಿ ನೀಡಿದರು. ಸೇವಾವಧಿಯಲ್ಲೂ ಕೂಡಾ ಜಯಕರ ಶೆಟ್ಟಿಯವರು ಶಾಲೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನೆಲೆಯಲ್ಲಿ ಶ್ರಮಿಸುತ್ತಾ ಬಂದವರು. ಸೇವೆಯಿಂದ ನಿವೃತ್ತಿಯಾಗುವ ಸಂದರ್ಭದಲ್ಲೂ ಕೂಡಾ ಮಾದರಿಯಾಗಿ ಮೂಡಿ ಬಂದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಸೌಕೂರು ಸುಭಾಶ್ಚಂದ್ರ ಶೆಟ್ಟಿ ವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಮೇಶ್ ಮಡಿವಾಳ, ವಯೋ ನಿವೃತ್ತಿ ಹೊಂದುತ್ತಿರುವ ಎ. ಜಯಕರ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬೈಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಆನಂದ ಕುಲಾಲ್, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಕರುಣಾಕರ ಸೇರೆಗಾರ್, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಶೆಟ್ಟಿ, ನಿವೃತ್ತ ಮುಖ್ಯ ಶಿಕ್ಷಕಿ ಹೆಚ್. ಸುಲೋಚನಾ ಶೆಟ್ಟಿ, ನಿವೃತ್ತ ಮುಖ್ಯ ಶಿಕ್ಷಕ ವೈ ಪ್ರಕಾಶ ಶೆಟ್ಟಿ, ನಿವೃತ್ತ ಶಿಕ್ಷಕ ರಮೇಶ್ ಜಿ ಲಮಾಣಿ, ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಗೌರವ ಶಿಕ್ಷಕಿ ಸುಜಾತಾ ಶೆಟ್ಟಿ ಸ್ವಾಗತಿಸಿದರು. ಶಿಕ್ಷಕ ಪ್ರಕಾಶ್ ಜಿಗಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಮ್ಸನ್ ಪ್ರೌಢಶಾಲೆ ಕಂಡ್ಲೂರು ಸಹ ಶಿಕ್ಷಕ ಸಂತೋಷ ಕಾರ್ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕಿ ಶ್ರೇಯಾ ವಂದಿಸಿದರು. ಕಾರ್ಯಕ್ರಮದಲ್ಲಿ ಅಧ್ಯಾಪಕ ವೃಂದ ,ಪೋಷಕರು, ಹಳೆ ವಿದ್ಯಾರ್ಥಿಗಳು, ಅಂಗನವಾಡಿ ಸಿಬ್ಬಂದಿಗಳು, ಅಡುಗೆ ಸಿಬ್ಬಂದಿಗಳು, ಶಾಲೆಯ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!