spot_img
Wednesday, August 5, 2026
spot_img

ಹಂಗಾರಕಟ್ಟೆ ಚೇತನಾ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಸಾಸ್ತಾನ: ಚೇತನಾ ಪ್ರೌಢಶಾಲೆ ಹಂಗಾರಕಟ್ಟೆ ಹಾಗೂ ರೋಟರಿ ಕ್ಲಬ್ ಹಂಗಾರಕಟ್ಟೆ -ಸಾಸ್ತಾನ, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಬೆಂಗಳೂರು, ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಉಡುಪಿ ಇವರ ಸಹಯೋಗದಲ್ಲಿ ಆ.5 ಬುಧವಾರ ಚೇತನಾ ಸಭಾಂಗಣದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಮುಕ್ತ ಬಾಯಿ, ಹಾಗೂ ಪ್ರೊಫೆಷನರಿ ಪೊಲೀಸ್ ಉಪನಿರೀಕ್ಷಕರಾದ ಆಶ್ರೀತಾ. ಎ. ಶೆಟ್ಟಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಪೋಕ್ಸೋ, ಸೈಬರ್ ಕ್ರೈಂ, ಮಕ್ಕಳ ಕಳ್ಳ ಸಾಗಣಿಕೆ, ಮಾದಕ ದ್ರವ್ಯ ವ್ಯಸನ, ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಹಾಗೂ ಕಾನೂನಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ನೀಡಿದರು.
ರೋಟರಿ ಕ್ಲಬ್ ಹಂಗಾರಕಟ್ಟೆ-ಸಾಸ್ತಾನ ಇದರ ಅಧ್ಯಕ್ಷರಾದ ಕುಸುಮ ಮನೋಜ್ ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪೋಷಕ ಪ್ರತಿನಿಧಿ ರೇಖಾ ಉಡುಪ, ಪಿ.ಎಲ್.ವಿ, ಡಿ.ಎಲ್.ಎಸ್.ಎ ಉಡುಪಿ ಇದರ ರಕ್ಷಿತ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ರೋಟರಿ ಕ್ಲಬಿನ ಮನೋಜ್ ಕುಮಾರ್, ಅರವಿಂದ್ ಶರ್ಮಾ, ಲಕ್ಷ್ಮೀನಾರಾಯಣ, ಲೀಲಾವತಿ, ಸುಲತಾ ಹೆಗಡೆ, ಜ್ಯೋತಿ ಉದಯ್ ಕುಮಾರ್, ಅಮಿತಾ, ಮಮತಾ ಶೆಟ್ಟಿ, ಶಾಲಾ ವಿದ್ಯಾರ್ಥಿ ನಾಯಕಿ ವರ್ಷ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಕಲ್ಪನಾ ಶೆಟ್ಟಿ ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಹರ್ಷವರ್ಧನ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

 

ವಿಡಿಯೋ ನೋಡಲು ಈ ಲಿಂಕ್ ಕ್ಲಿಕ್ ಮಾಡಿ https://www.facebook.com/share/v/1E76PSrj3N/

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!