spot_img
Thursday, August 6, 2026
spot_img

ಅವಿಭಜಿತ ಕುಂದಾಪುರ ತಾಲೂಕು ಪ್ರಾಥಮಿಕ ಕೃಷಿ ಉತ್ಪನ್ನ ನೌಕರರ ಒಕ್ಕೂಟದ ಅಭಿನಂದನೆ ನೌಕರರ ಸೇವೆ ಪ್ರಾಮಾಣಿಕವಾಗಿದ್ದರೆ ಸಂಘದ ಅಭಿವೃದ್ದಿ: ಎಂ. ಮಹೇಶ್ ಹೆಗ್ಡೆ|

ಕುಂದಾಪುರ: ವೃತ್ತಿಯಲ್ಲಿ ಕೆಲಸ ಮಾಡಿದ್ದು ಮುಖ್ಯ ಅಲ್ಲ. ಯಾವ ರೀತಿ ಸೇವೆ ಸಲ್ಲಿಸಿ ಕೆಲಸಮಾಡಿದ್ದಾರೆಂಬುದು ಮುಖ್ಯ. ಸಹಕಾರಿ ಕ್ಷೇತ್ರದಲ್ಲಿ ಸದಸ್ಯರಿಗೆ ಸ್ಪಂದಿಸಿ ಪ್ರಾಮಾಣಿಕ ಸೇವೆ ಸಲ್ಲಿಸಿದರೆ ಮಾತ್ರ ಸಂಘದ ಅಭಿವೃದ್ಧಿ ಸಾಧ್ಯ. ನಮ್ಮ ಭಾಗದ ನೌಕರರು ಉತ್ತಮ ಸೇವೆಯನ್ನು ನೀಡುತ್ತಿದ್ದಾರೆ. ಸಹಕಾರ ಸಂಘದ ಅಭಿವೃದ್ಧಿ ಆಡಳಿತ ಮಂಡಳಿಯಿಂದ ಮಾತ್ರ ಸಾಧ್ಯವಿಲ್ಲ. ಸಿಬ್ಬಂದಿಗಳ ಪಾಲುದಾರಿಕೆ, ದುಡಿಮೆ ಮುಖ್ಯವಾಗಿರುತ್ತದೆ. ಸಿಬ್ಬಂದಿಗಳು ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಬೇಕು. ಎಲ್ಲೂ ಕೂಡ ತಪ್ಪಿಗೆ ಅವಕಾಶ ಮಾಡಿಕೊಡಬಾರದು ಎಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಮೊಳಹಳ್ಳಿ ಮಹೇಶ್ ಹೆಗ್ಡೆ ಹೇಳಿದರು.

ಅವರು ಗುರುವಾರ ಅವಿಭಜಿತ ಕುಂದಾಪುರದ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ನೌಕರರ ಒಕ್ಕೂಟದ ವತಿಯಿಂದ ಉಳ್ಳೂರು-ಮಚ್ಚಟ್ಟು ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರಭಾಕರ ಆಚಾರ್ಯರವರಿಗೆ ಏರ್ಪಡಿಸಿದ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಎ.ಜಿ.ಎಂ. ರಾಜೇಶ್ ಶೆಟ್ಟಿ, ಕುಂದಾಪುರ ಶಾಖಾ ವ್ಯವಸ್ಥಾಪಕರಾದ ಪ್ರವೀಣ ಕುಮಾರ್, ಸಹಕಾರ ಅಭಿವೃದ್ಧಿ ಅಧಿಕಾರಿ ಸ್ವಾಮಿ ಆಗಮಿಸಿದ್ದರು. ಅವಿಭಜಿತ ಕುಂದಾಪುರ ತಾಲೂಕು ಪ್ರಾಥಮಿಕ ಕೃಷಿ ಉತ್ಪನ್ನ ನೌಕರರ ಒಕ್ಕೂಟದ ಅಧ್ಯಕ್ಷರಾದ ವಿಶ್ವೇಶ್ವರ ಐತಾಳ್ ಪ್ರಾಸ್ತಾವಿಕ ಮಾತುಗಳನ್ನಾಡಿ, ಸ್ವಾಗತಿಸಿದರು. ಕಾರ್ಯದರ್ಶಿ ಕೀರ್ತಿ ಕುಮಾರ್ ಶೆಟ್ಟಿ ವಂದಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!