spot_img
Friday, August 7, 2026
spot_img

ಸಿ‌ಎಂಎ ಇಂಟರ್ಮೀಡಿಯಟ್ ಫಲಿತಾಂಶ: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಿಂದ ರಾಷ್ಟ್ರಮಟ್ಟದ ಸಾಧನೆ

ಸಿ‌ಎಂಎ ಇಂಟರ್ಮೀಡಿಯಟ್ ಫಲಿತಾಂಶ: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಿಂದ ರಾಷ್ಟ್ರಮಟ್ಟದ ಸಾಧನೆ
ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICMAI) ನಡೆಸಿದ ಸಿ‌ಎಂಎ ಇಂಟರ್ಮಿಡಿಯೇಟ್ ಜೂನ್-2026ರ ಪರೀಕ್ಷೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಕ್ತನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ದಾಖಲಿಸಿ ರಾಷ್ಟ್ರಮಟ್ಟದಲ್ಲಿ ಗಮನ ಸಳೆದಿದ್ದಾರೆ.

2024-25ರ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಬಿ.ಕಾಂ. ಪದವಿಯಲ್ಲಿ ಎರಡನೇ ರ್‍ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದುಕೊಟ್ಟ ಮುದೂರಿನ ಶೀನ ಪೂಜಾರಿಯವರ ಪುತ್ರಿ ಶ್ರೇಯಾ ಅವರು ಸಿ‌ಎಂಎ ಇಂಟರ್ಮಿಡಿಯೇಟ್ ಗ್ರೂಪ್-1 ಹಾಗೂ ಗ್ರೂಪ್ -2 ಎರಡೂ ಪರೀಕ್ಷೆಗಳಲ್ಲಿ ಮೊದಲ ಪ್ರಯತ್ನದಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಲ್ಲದೆ ಅಖಿಲ ಭಾರತ ಮಟ್ಟದಲ್ಲಿ 28ನೇ ಸ್ಥಾನ ಗಳಿಸುವ ಮೂಲಕ ಕಾಲೇಜಿಗೆ ರಾಷ್ಟ್ರಮಟ್ಟದ ಹೆಮ್ಮೆ ತಂದುಕೊಟ್ಟಿದ್ದಾರೆ.

ಪ್ರಾಕ್ತನ ವಿದ್ಯಾರ್ಥಿಗಳಾದ ಸಾಗರದ ಪಾಂಡುರಂಗ ಪೈಯವರ ಪುತ್ರಿ ಪವಿತ್ರ ಪೈ ಹಾಗೂ ಸಾಗರದ ದಿ. ಮಂಜುನಾಥ ಕೆ.ವಿ.ಯವರ ಪುತ್ರ ಮದನ್ ಎಂ.ವಿ., ಈರ್ವರು ಸಿ‌ಎಂಎ ಇಂಟರ್ಮೀಡಿಯಟ್ ಗ್ರೂಪ್ – 1 ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ಪ್ರಾಕ್ತನ ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಪೋಷಕರ ಪ್ರೋತ್ಸಾಹ ಹಾಗೂ ಕಾಲೇಜಿನ ಗುಣಮಟ್ಟದ ಶೈಕ್ಷಣಿಕ ಮಾರ್ಗದರ್ಶನವೇ ಈ ಸಾಧನೆಗೆ ಪ್ರಮುಖ ಕಾರಣವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!