spot_img
Saturday, August 15, 2026
spot_img

ಚಿಕ್ಕ ವಯಸ್ಸಿನಿಂದಲೇ ದೇಶಭಕ್ತಿಯ ಅರಿವು ಮೂಡಿಸಬೇಕು – ಶ್ರೀಮಾ ಹೆಮ್ಮಣ್ಣ

ಅಮಾಸೆಬೈಲು:ಚಿಕ್ಕ ಮಕ್ಕಳಿಗೆ ಸ್ವಾತಂತ್ರ್ಯ ಹೋರಾಟಗಾರರು ಮತ್ತು ರಾಷ್ಟ್ರ ನಾಯಕರ ಬಗ್ಗೆ ತಿಳಿಹೇಳಿ, ಅವರಲ್ಲಿ ದೇಶಭಕ್ತಿಯ ಅರಿವನ್ನು ಮೂಡಿಸಬೇಕು. ಆಗ ಅವರಿಗೆ ದೇಶ ಮತ್ತು ದೇಶಭಕ್ತಿಯ ಬಗ್ಗೆ ಗೌರವ ಮೂಡುತ್ತದೆ ಎಂದು ಶಿಕ್ಷಕ ರಕ್ಷಕ ಸಂಘದ ಕಾರ್ಯದರ್ಶಿ ಶ್ರೀಮತಿ ಶ್ರೀಮಾ ಹೆಮ್ಮಣ್ಣ ಅವರು ಅಭಿಪ್ರಾಯಪಟ್ಟರು.
ಅವರು ಡ್ಯುಯಲ್ ಸ್ಟಾರ್ ಶಾಲೆ ಅಮಾಸೆಬೈಲಿನಲ್ಲಿ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ ಮುಗ್ಧ ಮನಸ್ಸಿನ ಮಕ್ಕಳಿಗೆ ಸ್ವಚ್ಛ ಭಾರತದ ಕಲ್ಪನೆಯನ್ನು ಮೂಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ವಡ್ಡರ್ಸೆ ಪ್ರಕಾಶ್ ಆಚಾರ್ಯ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳಿಗೆ ಶುಭಾಶಯವನ್ನು ತಿಳಿಸಿದರು, ಕಾರ್ಯಕ್ರಮದಲ್ಲಿ ಶಾಲಾ ಉಪಾಧ್ಯಕ್ಷ ಸಚ್ಚಿದಾನಂದ ಅಡಿಗ, ಶಾಲಾ ಸಂಚಾಲಕರಾದ ಶಶಿಧರ್ ದೇವಾಡಿಗ, ಶಾಲಾ ಮುಖ್ಯೋಪಾಧ್ಯಾಯಿನಿ ರಾಧಿಕಾ ಎಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ಸುಪರ್ಣ ಹೆಮ್ಮಣ್ಣ ಯಡಮೊಗೆ, ಸದಸ್ಯರಾದ ಸುನಿಲ್ ಆಚಾರ್ಯ, ಪೋಷಕರಾದ ಲಕ್ಷ್ಮೀಶ ಹೆಮ್ಮಣ್ಣ ಮತ್ತು ಸುಯೋಗ್ ಹೆಗ್ಡೆ, ವಿದ್ಯಾರ್ಥಿ ನಾಯಕಿ ಮಾನ್ಯ, ದೈಹಿಕ ಶಿಕ್ಷಣ ಶಿಕ್ಷಕ ಕುಮಾರ್ ಸಾಲಿಗ್ರಾಮ, ಟ್ರಾನ್ಸ್‌ಪೋರ್ಟ್ ಮ್ಯಾನೇಜರ್ ರಮಾಕಾಂತ್ ಪೂಜಾರಿ, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿಘ್ನೇಶ್ ದೇವಾಡಿಗ ಸ್ವಾಗತಿಸಿದರು. ರಾಧಿಕಾ ಎಸ್ ವಂದಿಸಿದರು.
ನಂತರ ದೇಶಭಕ್ತಿಯ ಘೋಷಣೆಗಳಿರುವ ನಾಮಫಲಕಗಳನ್ನು ಹಿಡಿದು ವಿದ್ಯಾರ್ಥಿಗಳು ಜಾಥಾ ಮತ್ತು ಪೋಷಕರು ಕಾರ್ ರ್‍ಯಾಲಿ ಮೂಲಕ ಅಮಾಸೆಬೈಲು ಪೊಲೀಸ್ ಠಾಣೆಗೆ ತೆರಳಿ ಠಾಣಾಧಿಕಾರಿ ಶ್ರೀಮತಿ ಸುಧಾರಾಣಿ ಮತ್ತು ಸಿಬ್ಬಂದಿಗೆ ಶುಭಾಶಯ ತಿಳಿಸಿದರು.
ಕೊನೆಯಲ್ಲಿ ಮಕ್ಕಳಿಗೆ ಲಘು ಉಪಹಾರ ವಿತರಿಸಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!