spot_img
Saturday, August 15, 2026
spot_img

ಸೈಂಟ್ ಫಿಲಿಪ್ ನೇರಿ ಸೆಂಟ್ರಲ್ ಶಾಲೆ, ಬಸ್ರೂರು: 80ನೇ ಸ್ವಾತಂತ್ರ್ಯ ದಿನಾಚರಣೆ

ಬಸ್ರೂರು: ಸೈಂಟ್ ಫಿಲಿಪ್ ನೇರಿ ಸೆಂಟ್ರಲ್ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮವು ರಾಷ್ಟ್ರಧ್ವಜಾರೋಹಣದೊಂದಿಗೆ ಆರಂಭಗೊಂಡಿತು. ಕಾರ್ಯಕ್ರಮದ ಅಧ್ಯಕ್ಷರಾದ ಶಾಲಾ ಆಡಳಿತ ಮಂಡಳಿಯ ಜಂಟಿ ಕಾರ್ಯದರ್ಶಿಗಳಾದ ವಂದನೀಯ ಧರ್ಮ ಗುರು ರಾಯ್ ಲೋಬೊ, ಹಾಗೂ ಮುಖ್ಯ ಅತಿಥಿಯಾಗಿರುವ ಶ್ರೀಯುತ ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕರು, ಶ್ರೀಯುತ ರುಫಸ್ ಬರಟೋ, ಉಪಾಧ್ಯಕ್ಷರು ಪ್ಯಾರಿಸ್ ಪೆಸ್ಟ್ರೋಲ್ ಕಮಿಟಿ, ಸಂತ ಫಿಲಿಪ್ ನೇರಿ ಚರ್ಚ್ ಬಸ್ರೂರು,ಪ್ರಾಂಶುಪಾಲರು, ಡ್ಯಾನ್ಸಿ ಸುನಿಲ್ ಮಾರ್ಟಿಸ್ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿ ರಾಷ್ಟ್ರಗೀತೆಯನ್ನು ಹಾಡಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳು, ಭಾಷಣಗಳು, ನೃತ್ಯಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ದೇಶಪ್ರೇಮದ ಸಂದೇಶವನ್ನು ಸಾರಿದರು. ವಿದ್ಯಾರ್ಥಿಗಳ ಉತ್ಸಾಹಭರಿತ ಭಾಗವಹಿಸುವಿಕೆ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.
ಕಾರ್ಯಕ್ರಮದ ಅತಿಥಿಯಾದ ರುಫುಸ್ ಬರುತ್ತೋತಮ್ಮ ಸಂದೇಶದಲ್ಲಿ “ಸ್ವಾತಂತ್ರ್ಯವೆಂದರೆ ಕೇವಲ ಹಕ್ಕುಗಳನ್ನು ಅನುಭವಿಸುವುದಲ್ಲ; ದೇಶದ ಜವಾಬ್ದಾರಿಯುತ ನಾಗರಿಕರಾಗಿ ನಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದೂ ಆಗಿದೆ” ಎಂದು ತಿಳಿಸಿದರು.

ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ರಾಷ್ಟ್ರಾಭಿಮಾನ, ಏಕತೆ, ಶಿಸ್ತು ಹಾಗೂ ಜವಾಬ್ದಾರಿಯುತ ನಾಗರಿಕತ್ವದ ಭಾವನೆಗಳನ್ನು ಬೆಳೆಸುವ ಸಂದೇಶದೊಂದಿಗೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!