spot_img
Wednesday, September 30, 2026
spot_img

ಆತ್ರಾಡಿ ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ವಂಡ್ಸೆ: ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆ, ಆತ್ರಾಡಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಹಾಗೂ ದೇಶಭಕ್ತಿಯೊಂದಿಗೆ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಸಂಚಾಲಕರಾದ ಸುಭಾಷ್‌ಚಂದ್ರ ಶೆಟ್ಟಿ ವಹಿಸಿದ್ದರು. ಡಾ. ಹರ್ಷ ವರ್ಧನ ಶೆಟ್ಟಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಷ್ಟ್ರಭಕ್ತಿ, ದೇಶಸೇವೆ ಹಾಗೂ ಉತ್ತಮ ಆರೋಗ್ಯದ ಮಹತ್ವದ ಕುರಿತು ಮಾತನಾಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಎ.ಬಾಲಕೃಷ್ಣ ಶೆಟ್ಟಿ ಅವರು ಭಾಗವಹಿಸಿ, ಸ್ವಾತಂತ್ರ್ಯದ ಮಹತ್ವ ಹಾಗೂ ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರದ ಕುರಿತು ಮಾತನಾಡಿದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ದೀಪಿಕಾ ಸುಭಾಷ್ ಶೆಟ್ಟಿ ಸ್ವಾಗತಿಸಿದರು.

80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ಹೆಸರುಗಳನ್ನು ಘೋಷಿಸುತ್ತಾ ಹಾಗೂ ದೇಶಭಕ್ತಿಯ ಘೋಷಣೆಗಳನ್ನು ಕೂಗುತ್ತಾ ವಂಡ್ಸೆ ಪೇಟೆಯಲ್ಲಿ ಮೆರವಣಿಗೆಯನ್ನು ನಡೆಸಿದರು.
ಈ ಸಂದರ್ಭದಲ್ಲಿ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಯನ್ನು ಪರಿಗಣಿಸಿ ರುದ್ರಯ್ಯ ಆಚಾರ್ಯ ಹಾಗೂ ರವಿ ಕುಲಾಲ್, ಅಂಪಾರು ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಮಾನಸ್ವಿ ಹಾಗೂ ಪ್ರತೀಕ್ಷಾ ಶೆಟ್ಟಿ ನಿರೂಪಿಸಿದರು. ಸಂತೃಪ್ತಿ ವಂದಿಸಿದರು.

ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಶಾಲೆಯ ಆಡಳಿತ ಮಂಡಳಿಯ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!