spot_img
Sunday, August 16, 2026
spot_img

ಸಳ್ಕೊಡು ಸ.ಹಿ.ಪ್ರಾ.ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ: ಯೋಧರಿಗೆ ಗೌರವಾರ್ಪಣೆ

ಜಡ್ಕಲ್: ಬೈಂದೂರು ತಾಲೂಕು ಜಡ್ಕಲ್ ಗ್ರಾಮದ ಸಳ್ಕೊಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಹಾಗೂ ಯೋಧರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.

ಎಸ್ ಡಿ ಎಂ ಸಿ ಅಧ್ಯಕ್ಷರಾದ ಸುಬ್ಬಯ್ಯ ನಾಯ್ಕ ಧ್ವಜಾರೋಹಣ ನಡೆಸಿದರು.

ಸತತ ಎಂಟನೇ ವರ್ಷ ಏರ್ಪಡಿಸಿದ ಯೋಧರಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಭಾರತೀಯ ಭೂಸೇನೆಯ ಗಡಿ ಭದ್ರತಾ ಪಡೆಯ ಯೋಧರಾದ ಸಾಗರ ತಾಲೂಕಿನ ಕಟ್ಟಿನಕಾರು ಗ್ರಾಮದ ಭಾರತಿ. ಸಿ. ಯವರು ಮಾತನಾಡಿ “ದೇಶ ಮೊದಲು ನಂತರ ನಾವು ಎಂಬ ಧ್ಯೇಯೊಂದಿಗೆ ನಾವೆಲ್ಲರೂ ದೇಶಕ್ಕಾಗಿ ದುಡಿಯಬೇಕು. ಪ್ರತಿಯೊಬ್ಬ ವ್ಯಕ್ತಿಯು ಕಷ್ಟಪಟ್ಟು ಬದ್ಧತೆ ಪ್ರಾಮಾಣಿಕತೆಯಿಂದ ದೇಶ ಸೇವೆಯಲ್ಲಿ ತನ್ನನ್ನು ತೊಡಗಿಸಿ ಕೊಳ್ಳಬೇಕು. ವಿದ್ಯಾರ್ಥಿಗಳು ಎಳವೆಯಲ್ಲಿಯೇ ಈ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು.” ಎಂದರು.

ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್. ಡಿ. ಎಂ. ಸಿ. ಅಧ್ಯಕ್ಷ ಸುಬ್ಬಯ್ಯ ನಾಯ್ಕ ವಹಿಸಿದ್ದರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಜಡ್ಕಲ್ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ನಾರಾಯಣ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಕ್ಷತ್ರ ನಾಯ್ಕ, ಕೋಶಾಧಿಕಾರಿ ವರ್ಕಿ ಜೋಸೆಫ್, ಸುವರ್ಣ ವಿದ್ಯಾನಿಧಿ ಅಧ್ಯಕ್ಷರಾದ ಸುರೇಂದ್ರ ನಾಯ್ಕ, ಸಭಾಂಗಣ ನಿರ್ಮಾಣ ಸಮಿತಿ ಅಧ್ಯಕ್ಷರಾದ ಶ್ರೀಮತಿ ಪ್ರೇಮಾ ಎಸ್ ನಾಯ್ಕ, ಕೊಲ್ಲೂರು ಸಿ ಆರ್ ಪಿ ಶ್ರೀಮತಿ ಶೈಲಜಾ, ನಿವ್ರತ್ತ ಮುಖ್ಯ ಶಿಕ್ಷಕ ಬಾಬುಗೌಡ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ನಾಗರತ್ನ ಕೆ ಶೆಟ್ಟಿ, ಉಪಸ್ಥಿತರಿದ್ದರು. ಇದೇ ಸಂದರ್ಭ ಕೆನರಾ ಬ್ಯಾಂಕ್ ಪ್ರಾಯೋಜಿತ ಕೆನರಾ ವಿದ್ಯಾ ಜ್ಯೋತಿ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್ ಕುಮಾರ್ ಧ್ವಜಾರೋಹಣಕ್ಕೆ ಸಂಬಂಧಿಸಿದ ಜವಾಬ್ದಾರಿ ನಿರ್ವಹಿಸಿದರು. ಮುಖ್ಯ ಶಿಕ್ಷಕ  ನಾಗರಾಜ ಶೆಟ್ಟಿ ಸ್ವಾಗತಿಸಿದರು. ಸಹ ಶಿಕ್ಷಕ ಸತೀಶ್ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಗಿರೀಶ್ ಜಿ ಎಚ್ ಅತಿಥಿಗಳನ್ನು ಪರಿಚಯಿಸಿದರು. ಸಹ ಶಿಕ್ಷಕ ಭಾಸ್ಕರ ನಾಯ್ಕ ವಂದಿಸಿದರು. ಸಹ ಶಿಕ್ಷಕ ಉದಯ, ಸಹಶಿಕ್ಷಕಿ ಶ್ರೀಮತಿ ಗೀತಪ್ರಿಯ, ಗೌರವ ಶಿಕ್ಷಕಿ ಶ್ರೀಮತಿ ಸುಜಾತ, ಶ್ರೀಮತಿ ಶ್ರೀಜಾ, ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಕಂಪ್ಯೂಟರ್ ಶಿಕ್ಷಕಿ ಸೌಮ್ಯ ಸಹಕರಿಸಿದರು.

ವಿಡಿಯೋ ನೋಡಲು ಈ ಲಿಂಕ್ ಕ್ಲಿಕ್ ಮಾಡಿ

https://www.facebook.com/share/v/1ceKAPJpjW/

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!