spot_img
Saturday, August 22, 2026
spot_img

ಪತ್ರಕರ್ತನ ಮೇಲೆ ಸರಕಾರಿ ವೈದ್ಯನಿಂದ ಹಲ್ಲೆ: ಕುಂದಾಪುರ ಮಂಡಲ ಬಿಜೆಪಿ ತೀವ್ರ ಖಂಡನೆ

ಕುಂದಾಪುರ: ಕುಂದಾಪುರದ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಡಾ. ಮಹೇಂದ್ರ ಶೆಟ್ಟಿ ಹಲ್ಲೆ ನಡೆಸಿರುವುದು ಅತ್ಯಂತ ಖಂಡನೀಯ. ಪ್ರಾಮಾಣಿಕವಾಗಿ ಜನರ ಪರವಾಗಿ ಕೆಲಸ ಮಾಡುತ್ತಿರುವ ಪತ್ರಕರ್ತನ ಮೇಲಿನ ಈ ದಾಳಿಯನ್ನು ಕುಂದಾಪುರ ಬಿ.ಜೆ.ಪಿ ತೀವ್ರ ವಾಗಿ ಖಂಡಿಸುತ್ತದೆ ಎಂದು ಕುಂದಾಪುರ ಮಂಡಲ ಬಿಜೆಪಿ ಅಧ್ಯಕ್ಷ ಸುರೇಶ ಶೆಟ್ಟಿ ತಿಳಿಸಿದ್ದಾರೆ.

ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯುತ್ತಿದ್ದ ಅಕ್ರಮಗಳು ಹಾಗೂ ಡಾ.ಮಹೇಂದ್ರ ಶೆಟ್ಟಿ ಅವರ ವಿರುದ್ಧ ಕೇಳಿಬಂದಿದ್ದ ಭ್ರಷ್ಟಾಚಾರದ ಆರೋಪಗಳ ಕುರಿತು ಶ್ರೀಕಾಂತ್ ಹೆಮ್ಮಾಡಿ ಅವರು ಇತ್ತೀಚೆಗೆ ಕನ್ನಡಪ್ರಭ ಪತ್ರಿಕೆಯಲ್ಲಿ ಸರಣಿ ತನಿಖಾ ವರದಿಯನ್ನು ಪ್ರಕಟಿಸಿದ್ದರು. ಈ ವರದಿಗಳು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದವು. ಇದನ್ನು ಕುಂದಾಪುರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ಬಳಿಕ ಡಾ. ಮಹೇಂದ್ರ ಶೆಟ್ಟಿ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡುವ ವಿಚಾರ ಜಿಲ್ಲಾ ಆಡಳಿತ ಮುಂದೆ ಇಟ್ಟಾಗ ಜಿಲ್ಲಾ ಆಡಳಿತ ವರ್ಗಾವಣೆ ಆದೇಶ ಹೊರಡಿಸಿತ್ತು.

ಶುಕ್ರವಾರ ಶ್ರೀಕಾಂತ್ ಹೆಮ್ಮಾಡಿ ತನ್ನ ಪತ್ನಿ ಕುಂದಾಪುರ ಅವರೊಂದಿಗೆ ಹೊಟೇಲ್‌ನಲ್ಲಿ ಉಪಹಾರ ಸೇವಿಸುತ್ತಿದ್ದ ಸಂದರ್ಭದಲ್ಲಿ, ಅದೇ ಹೊಟೇಲ್‌ಗೆ ಬಂದಿದ್ದ ಡಾ. ಮಹೇಂದ್ರ ಶೆಟ್ಟಿ ಅವರು ಶ್ರೀಕಾಂತ್ ಅವರನ್ನು ಎಬ್ಬಿಸಿ ಹಲ್ಲೆ ನಡೆಸಿದ್ದಾರೆ.

ಪತ್ರಕರ್ತನ ಮೇಲೆ ಹಲ್ಲೆ ನಡೆಸುವುದು ಪ್ರಜಾಪ್ರಭುತ್ವದ ಮೇಲಿನ ದಾಳಿಯೇ ಆಗಿದೆ. ಪತ್ರಕರ್ತರು ಪ್ರಶ್ನೆ ಕೇಳುವುದನ್ನು, ಅಕ್ರಮಗಳನ್ನು
ಬಯಲಿಗೆಯವುದು ಪತ್ರಿಕಾ ಸ್ವಾತಂತ್ರ್ಯ. ಹಾಗಾಗಿ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲಿನ ಹಲ್ಲೆಯನ್ನು ಸಮಗ್ರವಾಗಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸುರೇಶ ಶೆಟ್ಟಿ ಆಗ್ರಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!