spot_img
Saturday, August 22, 2026
spot_img

ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸತತ 20ನೇ ಬಾರಿಗೆ ಸಾಧನಾ ಪ್ರಶಸ್ತಿ

ಸಹಕಾರ ಕ್ಷೇತ್ರದಲ್ಲಿ ನಿರಂತರ ಪ್ರಗತಿ ಮತ್ತು ಸರ್ವತೋಮುಖ ಅಭಿವೃದ್ಧಿಯನ್ನು ಸಾಧಿಸಿರುವ ಬಡಗಬೆಟ್ಟು ಕ್ರೆಡಿಟ್ ಕೋ
ಆಪರೇಟಿವ್ ಸೊಸೈಟಿ ಲಿ. ಉಡುಪಿ ಇದರ 2025-26ನೇ ಸಾಲಿನ ಕಾರ್ಯಕ್ಷಮತೆಗಾಗಿ ಸತತ 20ನೇ ಬಾರಿಗೆ ದ.ಕ. ಜಿಲ್ಲಾ
ಕೇಂದ್ರ ಸಹಕಾರಿ ಬ್ಯಾಂಕ್‍ನಿಂದ ನೀಡಲ್ಪಡುವ ಸಾಧನಾ ಪ್ರಶಸ್ತಿ ಲಭಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬ್ಯಾಂಕ್‌ನ ಅಧ್ಯಕ್ಷರಾದ ಡಾ| ಎಂ . ಎನ್. ರಾಜೇಂದ್ರ ಕುಮಾರ್ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ ಶೇರಿಗಾರ್ ಪ್ರಶಸ್ತಿಯನ್ನು
ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಎಲ್. ಉಮಾನಾಥ, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್,
ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಾದ ಲಾವಣ್ಯ ಕೆ.ಆರ್, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಸಂಘಗಳ ಉಪ
ನಿಬಂಧಕರಾದ ರಮೇಶ್ ಎಚ್.ಎನ್ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರು ವೇದಿಕೆಯಲ್ಲಿ
ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!