spot_img
Monday, August 24, 2026
spot_img

ಬ್ರಹ್ಮಾವರ ಬೈಕಾಡಿ ಗಾಂಧಿನಗರದಲ್ಲಿ ಹೆತ್ತ ತಂದೆ ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಲೆಗೈದ ಪಾಪಿಪುತ್ರ

ಬ್ರಹ್ಮಾವರ: ಪಾಪಿ ಪುತ್ರನೋರ್ವ ತಂದೆತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಲೆಗೈದ ಘಟನೆ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಬೈಕಾಡಿ ಗಾಂಧಿನಗರದಲ್ಲಿ ನಡೆದಿದೆ. ಶಾಹಿದ್ ಅಲಿ (31ವ) ಎಂಬವನು ತನ್ನ ತಂದೆ ಮೆಹಬೂಬ್ ಅಲಿ (55ವ) ಹಾಗೂ ತಾಯಿ ಸಂಶದ್ ಬೇಗಂ (೫೦ವ) ಎಂಬವರನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಘಟನೆ ಆಗಸ್ಟ್ 23ರ ರಾತ್ರಿ ನಡೆದಿದ್ದು ಸೋಮವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಸೋಮವಾರ ಬೆಳಿಗ್ಗೆ ಹಂತಕ ಶಾಹಿದ್ ಅಲಿ 112ಕ್ಕೆ ಕರೆ ಮಾಡಿ ನಾನು ನಿನ್ನೆ (ಆದಿತ್ಯವಾರ) ರಾತ್ರಿ ಸುಮಾರು 7 ಗಂಟೆಗೆ ನನ್ನ ತಂದೆ ತಾಯಿ ಪ್ರತಿನಿತ್ಯ ನನಗೆ ಮಾನಸಿಕ ಹಿಂಸೆ ನೀಡುತ್ತಿರುವುದರಿಂದ ಅವರನ್ನು ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ದಸ್ತಗಿರಿ ಮಾಡಿದ್ದಾರೆ.

ಶಾಹಿದ್ ಅಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದು ಆ ಕೆಲಸವನ್ನು ಸರಿಯಾಗಿ ಮಾಡದೆ ಮನೆಯಲ್ಲೇ ಇರುತ್ತಿದ್ದ ಎನ್ನಲಾಗಿದೆ. ಕೊಲೆಯಾದ ಮೆಹಬೂಬ್ ಅಲಿ ಚಾಲಕರಾಗಿ ದುಡಿಯುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!