spot_img
Saturday, August 29, 2026
spot_img

ಬಾರಕೂರು ಸುಜ್ಞಾನ ನ್ಯಾಷನಲ್ ಕಾಲೇಜಿನಲ್ಲಿ ಕಬಡ್ಡಿ ಪಂದ್ಯಾಟ: ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ ಬೆಳೆಸಲು ಕ್ರೀಡೆ ಅತ್ಯಗತ್ಯ; ಡಾ. ರಮೇಶ್‌ ಶೆಟ್ಟಿ

 

ಬಾರಕೂರು, ಆಗಸ್ಟ್ 27,2026: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ), ಉಡುಪಿ ಹಾಗೂ ಬಾರಕೂರಿನ ಸುಜ್ಞಾನ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕಬಡ್ಡಿ ಪಂದ್ಯಾವಳಿ-2026 ಗುರುವಾರ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.

ಪಂದ್ಯಾವಳಿಯನ್ನು ಬಾರಕೂರು ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಶಾಂತಾರಾಮ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ, “ಶಿಕ್ಷಣದಷ್ಟೇ ಮಹತ್ವವನ್ನು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೂ ನೀಡಬೇಕು. ವಿದ್ಯಾರ್ಥಿಗಳು ಸಿಗುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಸಾಧನೆಯ ಹಾದಿಯಲ್ಲಿ ಮುನ್ನಡೆಯಬೇಕು” ಎಂದು ಕರೆ ನೀಡಿದರು.

ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ ಎಜುಕೇಷನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಮಾತನಾಡಿ, “ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಹಾಗೂ ತಂಡದ ಮನೋಭಾವವನ್ನು ಬೆಳೆಸಲು ಕ್ರೀಡೆ ಅತ್ಯಗತ್ಯ” ಎಂದರು.

ಬಾರಕೂರು ಎಜುಕೇಶನಲ್ ಟ್ರಸ್ಟ್‌ನ ಕಾರ್ಯದರ್ಶಿ ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ “ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾಸಕ್ತಿ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು.

ವೇದಿಕೆಯಲ್ಲಿ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಕಾರ್ಯದರ್ಶಿ ದಿನೇಶ್ ಶೆಟ್ಟಿ, ಸುಜ್ಞಾನ ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಆಚಾರ್ಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಸುಜನ್ ನಾಯಕ್ ಉಪಸ್ಥಿತರಿದ್ದರು.

ವಿಜೇತರ ವಿವರ: ಪುರುಷರ ವಿಭಾಗ: ಪ್ರಥಮ: ಕೋಟ ವಿವೇಕ ಪದವಿ ಪೂರ್ವ ಕಾಲೇಜು
ದ್ವಿತೀಯ: ರಾಷ್ಟ್ರೋತ್ಥಾನ ಪದವಿ ಪೂರ್ವ ಕಾಲೇಜು, ಚೇರ್ಕಾಡಿ

ಮಹಿಳೆಯರ ವಿಭಾಗ:
ಪ್ರಥಮ: ಕೋಟ ವಿವೇಕ ಪದವಿ ಪೂರ್ವ ಕಾಲೇಜು
ದ್ವಿತೀಯ: ಎಸ್.ಡಿ.ಪಿ.ಟಿ. ಪದವಿಪೂರ್ವ ಕಾಲೇಜು, ಮಂದಾರ್ತಿ

ಸಮಾರೋಪ ಸಮಾರಂಭದಲ್ಲಿ ಬಾರಕೂರು ಎಜುಕೇಶನಲ್ ಟ್ರಸ್ಟ್‌ನ ಕಾರ್ಯದರ್ಶಿ ಅಶೋಕ್ ಕುಮಾರ್ ಶೆಟ್ಟಿ ಅವರು ವಿಜೇತ ತಂಡಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಫಲಕ ವಿತರಿಸಿದರು.

ಕಾಲೇಜಿನ ಉಪನ್ಯಾಸಕರಾದ ಸುಜನ್ ನಾಯಕ್ ಸ್ವಾಗತಿಸಿದರು. ನೈನಾ ಜೆ. ಶೆಟ್ಟಿ ಕಾರ‍್ಯಕ್ರಮ ನಿರೂಪಿಸಿ, ಅನುಪಮ ವಂದಿಸಿದರು. ಕಾರ‍್ಯಕ್ರಮದಲ್ಲಿ ಕಾಲೇಜಿನ ಶಿಕ್ಷಕ ವೃಂದ, ವಿವಿಧ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು, ದೈಹಿಕ ಶಿಕ್ಷಣ ಉಪನ್ಯಾಸಕರು ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!