spot_img
Saturday, August 29, 2026
spot_img

ಶ್ರೀರಾಮ ವಿದ್ಯಾಕೇಂದ್ರದಲ್ಲಿ ರಕ್ಷಾ ಬಂಧನ ಆಚರಣೆ

ಕುಂದಾಪುರ: ಕೋಡಿ ಶ್ರೀರಾಮ ನಗರದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ರಕ್ಷಾ ಬಂಧನ ಉತ್ಸವ ಆಚರಿಸಲಾಯಿತು. ಶಾಲಾ ಸಂಚಾಲಕ ಕೋಡಿ ನಾಗೇಶ್ ಕಾಮತ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ, ನಮ್ಮಲ್ಲಿನ ಭಿನ್ನತೆಯನ್ನು ಮರೆತು ವೈವಿಧ್ಯತೆಯಲ್ಲಿ ಏಕತೆಯನ್ನು ಸಾಧಿಸುವುದೇ ನಮ್ಮ ದೇಶದ ಪರಂಪರೆಯಾಗಿದೆ. ನಾವೆಲ್ಲ ಭಾರತ ಮಾತೆಯ ಮಕ್ಕಳು, ಒಡಹುಟ್ಟಿದವರು ಎಂಬುದನ್ನು ನೆನಪಿಸಿಕೊಳ್ಳಬೇಕಿದೆ. ರಾಷ್ಟ್ರ ಕಾರ್ಯ ಮಾಡುವಾಗ ಕಂಟಕಗಳು ಸಹಜ. ವಿಚಲಿತರಾಗದೆ ರಾಷ್ಟ್ರದ ಉನ್ನತಿಯ ಕೈಕಂರ್ಯದಲ್ಲಿ ಎಲ್ಲರೂ ಜೋಡಿಸಿ ಕೊಳ್ಳಬೇಕಿದೆ. ನಮ್ಮ ರಾಷ್ಟ್ರೀಯ ಜೀವನವು ಸಾಂಸ್ಕೃತಿಕ ಏಕಾತ್ಮತೆ ಮತ್ತು ಶ್ರೇಷ್ಠ ನಾಗರಿಕತೆಯ ಸದೃಡ ಅಡಿಪಾಯದ ಮೇಲೆ ನಿಂತಿದೆ ಎಂದರು.

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಲಿ ಹಾಗೂ ಕುಂದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ನಂಜ ನಾಯ್ಕ ಅವರಿಗೆ ವಿದ್ಯಾರ್ಥಿಗಳು ರಕ್ಷೆ ಕಟ್ಟಿದರು. ಶಾಲಾ ಪ್ರಾಂಶುಪಾಲ ಜಿತೇಂದ್ರ, ಆಶಾ, ಸುವರ್ಣ ಮುಂತಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!