spot_img
Tuesday, September 1, 2026
spot_img

ಕುಂದಾಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ‘ವಾತ್ಸಲ್ಯ ವಿದ್ಯಾ ನಿಧಿ’ ವಿತರಣೆ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕುಂದಾಪುರ ತಾಲೂಕು, ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮಾಶಾಸನ ಫಲಾನುಭವಿಗಳ ಮಕ್ಕಳಿಗೆ ವಾತ್ಸಲ್ಯ ವಿದ್ಯಾನಿಧಿ ಕಿಟ್ ಅನ್ನು ವಿತರಣೆ ಮಂಗಳವಾರ ನಡೆಯಿತು.

ವಾತ್ಸಲ್ಯ ವಿದ್ಯಾನಿಧಿ ಕಿಟ್ ವಿತರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಎಚ್ ಶೆಟ್ಟಿ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿಕ್ಷಣ ಇಲಾಖೆಗೆ ಬೇರೆ ಬೇರೆ ರೀತಿಯಲ್ಲಿ ಉಪಕಾರ ಮಾಡುತ್ತಿರುವುದು ಶ್ಲಾಘನೀಯ ಸಂಗತಿಯಾಗಿದೆ. ಜ್ಞಾನದೀಪ ಶಿಕ್ಷಕರನ್ನು ಒದಗಿಸುವುದರ ಜೊತೆಗೆ ತೀರ ನಿರ್ಗತಿಕರ ಸರಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಉಪಯೋಗಿ ಪರಿಕರಗಳನ್ನು ನೀಡಿ ಪ್ರೋತ್ಸಾಹ ನೀಡುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ತಾಲೂಕು ಯೋಜನಾಧಿಕಾರಿ ಉಮೇಶ ಶೆಟ್ಟಿ ಎಚ್ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮಾಜ ಮುಖಿ ಕಾರ್ಯವನ್ನು ಮಾಡುತ್ತಾ ಬರುತ್ತಿದೆ. ಇಂದು ಕುಂದಾಪುರ ತಾಲೂಕಿನಲ್ಲಿ ಮಾಶಾಸನ ಪಡೆಯುತ್ತಿರುವ ಮಕ್ಕಳಿಗೆ ಮಾತೃಶ್ರೀ ಹೇಮಾವತಿ ಅಮ್ಮನವರ ಆಕಾಂಕ್ಷೆಯಂತೆ ವಾತ್ಸಲ್ಯ ವಿದ್ಯಾನಿಧಿ ಕಿಟ್ ವಿತರಣೆ ಮಾಡುತ್ತಿದ್ದೇವೆ. ಸರಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ನೀಡುವ ವಿಶೇಷ ಸೌಲಭ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಣಕಾಸು ಪ್ರಬಂಧಕರಾದ ರೋಹಿತ್ ದೇವಾಡಿಗ, ಆಡಳಿತ ಪ್ರಬಂದಕರಾದ ರಾಧಿಕಾ, ಕುಂದಾಪುರ ತಾಲೂಕಿನ ಎಲ್ಲಾ ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಹಾಗೂ ವಾತ್ಸಲ್ಯ ವಿದ್ಯಾ ನಿಧಿ ಪಡೆದ 4ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ರೇಣುಕಾ ಕೋಡಪದವು ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!