spot_img
Wednesday, September 2, 2026
spot_img

ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಕುಂದಾಪುರ: ಭಾರತದ ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಅವರ ನೆನಪಿನಲ್ಲಿ
ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಕ್ರೀಡಾ ಸಂಘದ ಆಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ
ದಿನಾಚರಣೆಯನ್ನು ಆಗಸ್ಟ್ 29ರಂದು ಕಾಲೇಜಿನ ಬಿ.ಎಂ.ಎಸ್. ಕ್ರೀಡಾಂಗಣದಲ್ಲಿ
ಹಮ್ಮಿಕೊಳ್ಳಲಾಯಿತು.

ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಆಯೋಜಿಸಿದ ಪಂದ್ಯಾಟಕ್ಕೆ
ಸಂಸ್ಥೆಯ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಚಾಲನೆ ನೀಡಿ ಮಾತಾಡಿ,
ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕಾಗಿರುವುದು ವರ್ತಮಾನದ ತುರ್ತು. ಕ್ರೀಡೆ
ದೈಹಿಕ ಕ್ಷಮೆತೆಗೆ ಮಾತ್ರವಲ್ಲ; ಮಾನಸಿಕ ಸದೃಢತೆಗೆ ಸಹಕಾರಿ ಎಂದರು.

ಈ ಸಂದರ್ಭ ಸಂಸ್ಥೆಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರಂಜಿತ್ ಟಿ.ಎನ್, ಶೈಕ್ಷಣಿಕ
ನಿಕಾಯಕ ತಿಮ್ಮಪ್ಪ ಡಿ.ಎಸ್., ಪ್ರಾಧ್ಯಾಪಕರಾದ ಸತೀಶ್ ಶೆಟ್ಟಿ ಹೆಸ್ಕತ್ತೂರು, ವಿಲ್ಮಾ ಶೆರಲ್
ಕಾರ್ನೆಲಿಯೊ, ಶ್ರೀಜೇಶ್ ಜಿ. ನಾಯ್ಕ್, ಕ್ರೀಡಾ ಕಾರ್ಯದರ್ಶಿ ನಿಶಾಂತ್ ಡಿಸೋಜ, ಜೊತೆ ಕಾರ್ಯದರ್ಶಿ
ಕೀರ್ತೇಶ್ ಶೆಟ್ಟಿ, ವಿದ್ಯಾರ್ಥಿ ಪ್ರತಿನಿಧಿ ವಿಕಾಸ್ ಹಾಗೂ ಕ್ರೀಡಾ ಸಂಘದ ವಿದ್ಯಾರ್ಥಿಗಳು
ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ನಿರೀಕ್ಷಾ ಕೆ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!